ಕೊಡಗು ಯುವ ಸೇನೆಯ ಪದಾಧಿಕಾರಿಗಳ ನೇಮಕ



ಕೊಡಗು ಯುವಸೇನೆಯ ಮತ್ತೂರು ಕಿರುಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಧ್ಯಕ್ಷರಾಗಿ ಮತ್ತೂರು ಕಾಲೋನಿಯ ನಿವಾಸಿ ಸುನಿತಾ ಸುಬ್ರಮಣಿ ಪಿ ಜಿ ಹಾಗೂ ಉಪಾಧ್ಯಕ್ಷರಾಗಿ ಕೊರಕುಟ್ಟಿರ ರೀನಾ ವಿನೋದ್ ಅವರನ್ನು ನೇಮಕ ಮಾಡಲಾಗಿದೆ ಎಂದು ಯುವ ಸೇನೆಯ ಪ್ರಮುಖರಾದ ಕುಲದೀಪ್ ಪೂಣಚ್ಚ ಹಾಗೂ ಜಿಲ್ಲಾ ಸಂಚಾಲಕರಾದ ಮಾಚೆಟ್ಟಿರ ಸಚಿನ್ ಮಂದಣ್ಣ ಅವರು ತಿಳಿಸಿದ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅವರು ಮಾಡುತ್ತಿರುವ ಸಮಾಜ ಸೇವೆಯನ್ನು ಪರಿಗಣಿಸಿ ಜಿಲ್ಲಾ ಉಪಾಧ್ಯಕ್ಷರಾದ ಲತಾ ಬೋಪಯ್ಯ ಅವರ ಸೂಚನೆಯ ಮೇರೆಗೆ ಈ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ಪ್ರಮುಖರು ತಿಳಿಸಿದ್ದಾರೆ.