ಕೊಡವರ ಬಗ್ಗೆ ಹಗುರವಾಗಿ ಮಾತನಾಡಬೇಡಿ. – ಪ್ರತಾಪ್ ಸಿಂಹ

ಕೊಡವರು ಗೋಮಾಂಸ ತಿನ್ನುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಮೈಸೂರು ಮತ್ತು ಕೊಡಗು ಸಂಸದ ಪ್ರತಾಪ್ ಸಿಂಹ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ನಿಮ್ಮ ಅಕ್ಕ ಪಕ್ಕದಲ್ಲಿರುವವರು ಗೋಮಾಂಸ ತಿನ್ನಬಹುದು. ಆದರೆ ಇಡೀ ಕೊಡವರನ್ನು ಗೋಮಾಂಸ ತಿನ್ನುತ್ತಾರೆ ಎಂದರೆ ಹೇಗೆ?. ನೀವು ಗೋಮಾಂಸ ತಿಂತೀರಿ ಅಂತ ಇಡೀ ಕುರುಬ ಸಮಾಜ ಬೀಫ್ ತಿಂತಾರೆ ಅನ್ನೋಕೆ ಆಗುತ್ತಾ? ಎಂದು ಸಿದ್ದರಾಮಯ್ಯಗೆ ಸಂಸದ ಪ್ರತಾಪ್‌ಸಿಂಹ ಪ್ರಶ್ನೆ ಹಾಕಿದ್ದಾರೆ.
ಸಿದ್ದರಾಮಯ್ಯ ವಿವೇಚನೆ ಇಲ್ಲದೆ ಯಾಕೆ ಮಾತನಾಡಿದ್ದಾರೆ ಅನ್ನೋದೆ ನನಗೆ ಅರ್ಥ ಆಗ್ತಿಲ್ಲ.
ಆತ್ಮದ್ರೋಹದ ಮಾತುಗಳನ್ನು ಕಾಂಗ್ರೆಸ್ ನವರು ಮಾತ್ರ ಮಾತನಾಡೋಕೆ ಸಾಧ್ಯ ಎಂದು ತಿವಿದ ಪ್ರತಾಪ್ ಸಿಂಹ, ಇನ್ನು ಮುಂದಾದರೂ ಕೊಡವರ ಬಗ್ಗೆ ಹಗುರವಾಗಿ ಮಾತನಾಡಬೇಡಿ. ಗೋಮಾತೆಯನ್ನು ಎರಡನೇ ತಾಯಿಯಾಗಿ ನೋಡುತ್ತಾರೆ.
ಕೋಟ್ಯಂತರ ಜನರ ಭಾವನೆಗೆ ಧಕ್ಕೆ ಬರುವಂತೆ ಮಾತನಾಡಬೇಡಿ ಎಂದು ಪ್ರತಾಪ್ ಸಿಂಹ ಅವರು ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದರು.