ಕೊಡವ ಅಭಿವೃದ್ಧಿ ನಿಗಮ ಘೋಷಣೆಗೆ ಶಾಸಕರಿಂದ ಮನವಿ

ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತಂತೆ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಕೆ.ಜಿ. ಬೋಪಯ್ಯ ನವರೊಂದಿಗೆ “ಯುಕೊ” ಸಂಘಟನೆಯ ನಿಯೋಗ ಇಂದು ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಬಿ.ಎಸ್. ಯಡಿಯೂರಪ್ಪನವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮುಂದಿನ ಮುಂಗಡ ಪತ್ರದಲ್ಲಿ ” ಕೊಡವ ಅಭಿವೃದ್ಧಿ ನಿಗಮ” ಘೋಷಿಸಲು ಸರಕಾರದ ಮಟ್ಟದಲ್ಲಿ ಮಾತುಕತೆ ನಡೆಸುವಂತೆ ಮನವಿ ಸಲ್ಲಿಸಲಾಯಿತು. ಇದಕ್ಕೆ ಮಾಜಿ ಮುಖ್ಯಮಂತ್ರಿಗಳು ಸಕರಾತ್ಮಕವಾಗಿ ಸ್ಪಂದಿಸಿರುತ್ತಾರೆ.