fbpx

ಕೊರೋನಾ ಲಸಿಕೆಗೆ ನಡೆಯುತ್ತಿದೆ ಸಿದ್ಧತೆ

ಬೆಂಗಳೂರು: ಕೊರೊನಾ ಲಸಿಕೆ ನೀಡಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಲಾಗುವುದು ಎಂದು ಹೇಳಲಾಗಿದೆ.

ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರಾದ ಡಾ. ಅರುಂಧತಿ ಚಂದ್ರಶೇಖರ್ ಸೋಮವಾರ ಪತ್ರ ಬರೆದಿದ್ದು ಆರೋಗ್ಯ ವ್ಯವಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರ ಮಾಹಿತಿ ಸಲ್ಲಿಸಲು ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ಮೇಲುಸ್ತುವಾರಿಯಾಗಿ ನಿಯೋಜಿತರಾಗಲಿದ್ದು, ಜಿಲ್ಲೆಯಲ್ಲಿರುವ ಆರೋಗ್ಯ ಸಂಸ್ಥೆಗಳ ವಿವರ, ಕೆಲಸ ನಿರ್ವಹಿಸುವ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರ ಮಾಹಿತಿಯನ್ನು ಕೇಂದ್ರ ಸರ್ಕಾರದ ಕೋವಿಡ್-19 ವ್ಯಾಕ್ಸಿನೇಷನ್ ಬೇನಿಫಿಷೇರಿ ಮ್ಯಾನೇಜ್ಮೆಂಟ್ ಸಿಸ್ಟಮ್ ನಲ್ಲಿ ಅಪ್ಲೋಡ್ ಮಾಡುವಂತೆ ತಿಳಿಸಲಾಗಿದೆ.

ಅಕ್ಟೋಬರ್ 31 ರೊಳಗೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ತಿಳಿಸಲಾಗಿದ್ದು, ಆರೋಗ್ಯ ವ್ಯವಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಮೊದಲ ಹಂತದಲ್ಲಿ ಲಸಿಕೆ ನೀಡಲಾಗುತ್ತದೆ ಎಂದು ಹೇಳಲಾಗಿದೆ.

error: Content is protected !!