ಕೊವಿಡ್ ಪರಿಸ್ಥಿತಿ ಗಮನಿಸಿ ಜೂನ್ 7ರ ನಂತರ ಮುಂದಿನ ನಿರ್ಧಾರ

ಕೊಡಗು ಜಿಲ್ಲೆಯಲ್ಲಿ ಕೋವಿಡ್19 ಪ್ರಕರಣಗಳು ನಿಯಂತ್ರಣಕ್ಕೆ ಬರುತ್ತಿದ್ದು, ಜೂನ್ 7 ರ ನಂತರ ಲಾಕ್‍ಡೌನ್ ಮುಂದುವರೆಸಬೇಕೆ? ಅಥವಾ ಬೇಡವೇ? ಎಂಬ ಬಗ್ಗೆ ಇನ್ನೂ 10 ದಿನಗಳ ಪರಿಸ್ಥಿತಿ ಅವಲೋಕಿಸಿ ನಿರ್ಧರಿಸಬಹುದಾಗಿದೆ ಎಂದು ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.
ಕೋವಿಡ್ 19 ನಿಯಂತ್ರಿಸಲು ಸಾಕಷ್ಟು ಶ್ರಮ ವಹಿಸಲಾಗುತ್ತಿದೆ. ಆ ದಿಸೆಯಲ್ಲಿ ಪರೀಕ್ಷೆಗೆ ಒಳಪಟ್ಟವರನ್ನು ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲು ಮಾಡುವುದು, ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಗುಣಪಡಿಸುವ ಕೆಲಸ ನಡೆಯುತ್ತಿದೆ ಎಂದು ಶಾಸಕರು ತಿಳಿಸಿದರು.

ಕೋವಿಡ್ 19 ಲಕ್ಷಣಗಳು ಇದ್ದಲ್ಲಿ ಹತ್ತಿರದ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಉದಾಶೀನ ಮಾಡಬಾರದು. ಆರಂಭದಲ್ಲಿಯೇ ಮುನ್ನೆಚ್ಚರಿಕೆ ವಹಿಸಿದ್ದಲ್ಲಿ ಕೋವಿಡ್ 19 ನ್ನು ಗುಣಪಡಿಸಿ ಕೊಳ್ಳಬಹುದಾಗಿದೆ ಎಂದು ಶಾಸಕರು ಹೇಳಿದರು.

error: Content is protected !!