ಕೋವಿಡ್ ಲಸಿಕೆ ನೀಡಿಕೆಯಲ್ಲಿ ಕೊಡಗು ರಾಜ್ಯದಲ್ಲೇ ಪ್ರಥಮ

ಕೋವಿಡ್ ಲಸಿಕೆ ನೀಡಿಕೆಯಲ್ಲಿ ಕೊಡಗು ಜಿಲ್ಲೆ ರಾಜ್ಯದಲ್ಲೇ ಪ್ರಥಮ‌ ಸ್ಥಾನದಲ್ಲಿದ್ದು, ಶೀಘ್ರದಲ್ಲೇ‌ ಶೇ.100ರಷ್ಟು ಸಾಧನೆ ಮಾಡಲಾಗುವುದು ಎಂದು ಶಾಸಕರಾದ ಅಪಚ್ಚು ರಂಜನ್ ತಿಳಿಸಿದರು.

ನಗರದಲ್ಲಿ ಮಾತನಾಡಿದ ಅವರು ವಿಪಕ್ಷಗಳ ಅಪಪ್ರಚಾರದ ನಡುವೆಯೂ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ನಿಲುವು, ಬದ್ಧತೆಯ ಕಾರಣದಿಂದ ದೇಶದಲ್ಲಿ 100ಕೋಟಿ ಕೋವಿಡ್ ಲಸಿಕೆ ನೀಡಲು ಸಾಧ್ಯವಾಗಿದ್ದು, ಲಸಿಕೆ ಸಂಶೋಧನೆಗೆ ಶ್ರಮಿಸಿದ ವಿಜ್ಞಾನಿಗಳು,ಲಸಿಕೆ ನೀಡಲು ಅವಿರತವಾಗಿ ಶ್ರಮಿಸಿದ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು, ಆಶಾ, ಅಂಗನವಾಡಿ ಕಾರ್ಯಕರ್ತರು ಮತ್ತು ಲಸಿಕೆ ಪಡೆದು ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು.

ಕೊಡಗು ಜಿಲ್ಲೆಯಲ್ಲೂ ಕೆಲವು ವರ್ಗದ ಜನರಿಗೆ ಲಸಿಕೆ‌ ನೀಡುವುದು ಸವಾಲಿನ ಕೆಲಸವಾಗಿತ್ತು.ಆದರೆ ಆರೋಗ್ಯ, ಆಶಾ, ಅಂಗನವಾಡಿ ಕಾರ್ಯಕರ್ತರು, ಪಂಚಾಯತ್ ಮಟ್ಟದ ಟಾಸ್ಕ್ ಫೋರ್ಸ್ ಸಹಕಾರದಿಂದ ಆ ವರ್ಗದವರ ಮನವೊಲಿಸಿ ಲಸಿಕೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದು, ಇನ್ನು ಕೇವಲ 30ಸಾವಿರದಷ್ಟು ಮಂದಿಗೆ ಲಸಿಕೆ ನೀಡಲು ಬಾಕಿ ಇದೆ. ಇದನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದಲ್ಲದೆ, ಜಿಲ್ಲೆಯಲ್ಲಿ ಸಣ್ಣ ಮಕ್ಕಳಿಗೂ ಲಸಿಕೆ ಕೊಡಿಸಲು ತಯಾರಿ ನಡೆಸಲಾಗುತ್ತಿದೆ ಎಂದು ಕೆಜಿಬಿ ತಿಳಿಸಿದರು .

error: Content is protected !!