ಕೋವಿಡ್ ಲಸಿಕೆ ಪಡೆಯಲು ಹೆಸರು ನೋಂದಾಯಿಸಿ


ಮಡಿಕೇರಿ ಮೇ 24:-ಪರಿಶಿಷ್ಟ ಜಾತಿ ಜನಾಂಗದವರಿಗೆ ಅನುಕೂಲವಾಗುವಂತೆ ವಿರಾಜಪೇಟೆ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ ಹಾಗೂ ಇಲಾಖಾ ವ್ಯಾಪ್ತಿಯಡಿ ಕಾರ್ಯನಿರ್ವಹಿಸುತ್ತಿರುವ 07 ಮೆಟ್ರಿಕ್ ಪೂರ್ವ ಬಾಲಕರ /ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಕೋವಿಡ್-19 ಲಸಿಕೆ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದೆ.

ರಜಿತ್ (9880232773) ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ, ಸಪ್ನ (ವಾರ್ಡನ್) (9611296776) ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ, ಪೊನ್ನಂಪೇಟೆ, ಪೂವಮ್ಮ (ವಾರ್ಡನ್) (9535646890) ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಪೊನ್ನಂಪೇಟೆ, ರಜನಿ (ವಾರ್ಡನ್) (9901909200) ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ, ವಿರಾಜಪೇಟೆ, ಸಾವಿತ್ರಿ (ವಾರ್ಡನ್) (9663141843) ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ವಿರಾಜಪೇಟೆ, ಗೌರಮ್ಮ (ವಾರ್ಡನ್) (8762348483) ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ, ಪಾಲಿಬೆಟ್ಟ, ಚೋಂದಮ್ಮ (ವಾರ್ಡನ್) (8884047735) ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಬಾಳೆಲೆ, ಪಾರ್ವತಿ (ವಾರ್ಡನ್) (9741623105) ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಕಾಕೋಟುಪರಂಬು.

ಪರಿಶಿಷ್ಟ ಜಾತಿ ಜನಾಂಗದವರು ತಮ್ಮ ಆಧಾರ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‍ನಲ್ಲಿ ನಮೂದಾಗಿರುವ ಮೊಬೈಲ್‍ನೊಂದಿಗೆ ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ, ಉಳಿದ ದಿನಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯೊಳಗೆ ತಮ್ಮ ಹತ್ತಿರದ ನೋಂದಣಿ ಕೇಂದ್ರಗಳಿಗೆ ಭೇಟಿ ನೀಡಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಂಡು ಇದರ ಸದುಪಯೋಗ ಪಡೆದುಕೊಳ್ಳುವಂತೆ ಪೊನ್ನಂಪೇಟೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು (ಶ್ರೇಣಿ-2) ಅವರು ಕೋರಿದ್ದಾರೆ.

error: Content is protected !!