ಕ.ಸಾ.ಪ ಹಾಗು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ವತಿಯಿಂದ ವಿಶ್ವೇಶ್ವರಯ್ಯ ಜನ್ಮದಿನಾಚರಣೆ

ಮಡಿಕೇರಿ ಸೆ 13. ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪರಲ್ಲೊಬ್ಬರಾದ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯರವರ ೧೬೦ ನೇ ಜನ್ಮದಿನ ಆಚರಣೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರಕಾರಿ ಕೈಗಾರಿಕ ತರಬೇತಿ ಸಂಸ್ಥೆ ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 15.09.2022 ರ ಗುರುವಾರ 10 ಗಂಟೆಗೆ ಮಡಿಕೇರಿಯ ಐ.ಟಿ.ಐ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ವಹಿಸಲಿದ್ದು ಉದ್ಘಾಟನೆಯನ್ನು
ಮಡಿಕೇರಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಪಂಡಿತಾರಾಧ್ಯ ಕೆ.ಹೆಚ್. ಎಂ. ರವರು ನೆರವೇರಿಸಲಿದ್ದಾರೆ.
ಸರ್ ಮೋಕ್ಷಗೊಂಡ ವಿಶ್ವೇಶ್ವರಯ್ಯರವರ ಕುರಿತು ನಿವೃತ್ತ ಪ್ರಾಂಶುಪಾಲರಾದ ಡಾ. ಜೆ.ಸೋಮಣ್ಣ ರವರು ಉಪನ್ಯಾಸ ನೀಡಲಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ಚಿನ್ನಸ್ವಾಮಿ ಮತ್ತು ಮಡಿಕೇರಿ ನಗರಸಬೆಯ ಆಯುಕ್ತರಾದ ವಿಜಯ್ ರನರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ ಮುನೀರ್ ಅಹಮದ್ ಪತ್ತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.