ಕ.ಸ.ಪ ಪದಾಧಿಕಾರಿಗಳ ಆಯ್ಕೆ

ಮಡಿಕೇರಿ. ಕೊಡ್ಲಿಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಪಿ.ಶಾಂತಮಲ್ಲಪ್ಪ ಆಯ್ಕೆಯಾಗಿದ್ದಾರೆ. ಗೌರವ ಕಾರ್ಯದರ್ಶಿಗಳಾಗಿ
ಡಿ.ಹೆಚ್. ಶಾಂತಕುಮಾರ್ ಮತ್ತು ಜಿ.ಪಿ.ಕವಿತ ಹಾಗೂ ಗೌರವ ಕೋಶಾಧಿಕಾರಿಯಾಗಿ ಡಾ. ಸಿ ಆರ್ ಉದಯ ಕುಮಾರ್ ಆಯ್ಕೆಯಾಗಿದ್ದಾರೆ.

ಕೊಡ್ಲಿಪೇಟೆಯ ಡಾ.ಉದಯ್ ಕುಮಾರ್ ರವರ ಸಭಾಂಗಣದಲ್ಲಿ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕೊಡ್ಲಿಪೇಟೆ ಹೋಬಳಿ ಕಸಾಪ ಸದಸ್ಯರ ಸಮಾಲೋಚನೆ ಮತ್ತು ಕಾರ್ಯಕಾರಿ ಸಮಿತಿ ಆಯ್ಕೆಯ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಸಭೆಯಲ್ಲಿ ಉಪಸ್ಥಿತರಿದ್ದ ಕಸಾಪ ಜಿಲ್ಲಾ ಅಧ್ಯಕ್ಷ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಹೋಬಳಿ ಅಧ್ಯಕ್ಷರ ಆಯ್ಕೆ ಜಿಲ್ಲಾ ಅಧ್ಯಕ್ಷರ ಅಧಿಕಾರವಾಗಿದ್ದು ಅದನ್ನು ಚಲಾಯಿಸದೆ ಪ್ರಜಾಪ್ರಭುತ್ವ ರೀತಿಯಲ್ಲಿ ಸದಸ್ಯರೇ ತಮ್ಮ ಹೋಬಳಿಯ ಅಧ್ಯಕ್ಷ ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರ‌ ಆಯ್ಕೆಗಾಗಿ ಈ ಸಭೆಯನ್ನು ಕರೆಯಲಾಗಿದೆ. ಅಧಿಕಾರ ವಿಕೇಂದ್ರೀಕರಣ ಗೊಳ್ಳಬೇಕು ಮತ್ತು ಅರ್ಹ ಸಮಿತಿ ಸದಸ್ಯರನ್ನು ಆಯ್ಕೆ ಮಾಡಿಕೊಳ್ಳಬೇಕು. ನಿಸ್ವಾರ್ಥ ಸೇವೆಯ ಮೂಲಕ ಪರಿಷತ್ತನ್ನು ಮುನ್ನಡೆಸುವ ಸಮಿತಿಯನ್ನು ಆಯ್ಕೆ ಮಾಡುವಂತೆ ಸಲಹೆ ನೀಡಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕೊಡಗು ಕಸಾಪಾ ಪೂರ್ವಾಧ್ಯಕ್ಷ ಟಿ.ಪಿ ರಮೇಶ್ ಮಾತನಾಡುತ್ತಾ ಹೋಬಳಿ ಸಮಿತಿಗಳು ಕಸಾಪದ ತಾಯಿ ಬೇರು ಇದ್ದಂತೆ ಅವು ಸಮರ್ಪಕವಾಗಿ ಕಾರ್ಯ ನಿರ್ವಹಿಸಿದರೆ ತಾಲೂಕು, ಜಿಲ್ಲಾ, ರಾಜ್ಯದ ಸಮಿತಿಗಳು ಕೆಲಸ ಮಾಡಲು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಉತ್ತಮ ಸಮಿತಿಯನ್ನು ಆಯ್ಕೆ ಮಾಡುವ ಜವಾಬ್ದಾರಿ ಸದಸ್ಯರ ಮೇಲಿದೆ ಎಂದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಕೊಡ್ಲಿಪೇಟೆ ಹೋಬಳಿ ನಿಕಟಪೂರ್ವ ಅಧ್ಯಕ್ಷ ಅಬ್ದುಲ್ ರಬ್ ಮಾತನಾಡಿ ಸಾಹಿತ್ಯ ಪರಿಷತ್ತಿನ ಹೋಬಳಿ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ ತೃಪ್ತಿ ಇದೆ. ಆ ಸಂಧರ್ಭದಲ್ಲಿ ಸಹಕಾರ ನೀಡಿದ ಎಲ್ಲರನ್ನು ವಂದಿಸಿದರು. ಅಧ್ಯಕ್ಷತೆ ವಹಿಸಿದ್ದ ಎಸ್ ಡಿ ವಿಜೇತ್ ಪದಾಧಿಕಾರಿಗಳ ಘೋಷಣೆ ಮಾಡಿದರು.

ಜಿಲ್ಲಾ ಸಮಿತಿ ಸದಸ್ಯ ವಿ.ಟಿ.ಮಂಜುನಾಥ್, ತಾಲೂಕು ಕಾರ್ಯದರ್ಶಿ ವೀರರಾಜು, ತಾಲೂಕು ಸಮಿತಿ ಸದಸ್ಯ ನಂಗಾರು ಕೀರ್ತಿ ಪ್ರಸಾದ್ ಉಪಸ್ಥಿತರಿದ್ದರು.

error: Content is protected !!