ಖತರ್ನಾಕ್ ಕದೀಮ ಅಂದರ್

ಪೊನ್ನಂಪೇಟೆ ಮತ್ತು ಗೋಣಿಕೊಪ್ಪ ಪೊಲೀಸ್ ಠಾಣೆಯ ವ್ಯಾಪ್ತಿಯ ವ್ಯಾಪಾರ ಮಳಿಗೆಗಳಲ್ಲಿ ಕ್ಯಾಷ್ ಕೌಂಟರ್ ನಲ್ಲಿ ಹಣ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಪೊನ್ನಂಪೇಟೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತನು ಪೊನ್ನಂಪೇಟೆಯ ಮಹಮದ್ ಇಕ್ಬಾಲ್ ಆಗಿದ್ದು, ಮೂರು ಪ್ರತ್ಯೇಕ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂದು ತಿಳಿದು ಬಂದಿದೆ.

ಸಿಪಿಐ ಗೋವಿಂದರಾಜು ನೇತೃತ್ವದ ತಂಡ ಕಾರ್ಯಚರಣೆ ನಡೆಸಿದ್ದು, ಬಂಧಿತನಿಂದ ಕೃತ್ಯಕ್ಕೆ ಬಳಸಿದ್ದ ಕಾರು ಮತ್ತು ಹಣವನ್ನು ವಶಕ್ಕೆ ಪಡೆಯಲಾಗಿದೆ.

error: Content is protected !!