ಖಾಸಗಿ ಶಾಲಾ ಶಿಕ್ಷಕರಿಗೂ ಪ್ಯಾಕೇಜ್ ಘೋಷಿಸಲು ಸಿಎಂಗೆ ಪತ್ರ ಬರೆದ ಸಚಿವ ಸುರೇಶ್ ಕುಮಾರ್

ಖಾಸಗಿ ಅನುದಾನ ರಹಿತ ಶಾಲಾ ಶಿಕ್ಷಕ-ಶಿಕ್ಷಕೇತರ ಸಮುದಾಯಕ್ಕೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಪತ್ರ ಬರೆದಿರುವ ಸಚಿವರು, ಕೋವಿಡ್ ಕಾರಣದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಕ್ಷೇತ್ರಗಳಲ್ಲಿ ಶಿಕ್ಷಣ ಕ್ಷೇತ್ರವೂ ಪ್ರಧಾನವಾದ ಕ್ಷೇತ್ರವಾಗಿದೆ.ಸರ್ಕಾರ ವಿಧಿಸಿದಲಾಕ್ ಡೌನ್ ರಾಜ್ಯಾದ್ಯಂತ ಇರುವ ಸಾವಿರಾರು ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಮೇಲೆ ಅವಲಂಬಿಸಿದ್ದು , ಹಲವು ವರ್ಗಗಳ ಜೀವನದ ಮೇಲೆ ಗಂಭೀರ ಪರಿಣಾಮ ಬೀರಿದೆ. ಕಳೆದ ಸಾಲಿನಲ್ಲಿ ಭೌತಿಕ ತರಗತಿಗಳು ನಡೆಯದ ಕಾರಣ, ಪೋಷಕರು ಮಕ್ಕಳ ಬೋಧನಾ ಶುಲ್ಕವನ್ನು ಸರಿಯಾಗಿ ಪಾವತಿಸದ ಕಾರಣ ಇದೂ ಕೂಡಾ ಬಹು ವಿಧದ ಸಾಮಾಜಿಕ ಸಮಸ್ಯೆಗಳಿಗೆ ಕಾರಣವಾಗಿದೆ ಎಂದಿದ್ದಾರೆ.
ಕೋವಿಡ್ ಕಾರಣದಿಂದ ಸಂಕಷ್ಟಕ್ಕೆ ಸಿಲುಕಿರುವ, ಬಜೆಟ್ ಅನುದಾನರಹಿತ ಶಾಲೆ ಕಾಲೇಜುಗಳಲ್ಲಿ ಕೆಲಸ ಮಾಡುವ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗೆ ತಾವು ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ಈ ಸಮುದಾಯಕ್ಕೆ ವಿಶ್ವಾಸ ತುಂಬಬೇಕೆಂದು ಸಚಿವ ಸುರೇಶ್ ಕುಮಾರ್ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.