ಗಡಿಭಾಗದ ಜಿಲ್ಲೆಗಳಲ್ಲಿ ಶೇ.100 ರಷ್ಟು ಕೋವಿಡ್ ಮೊದಲ ಡೋಸ್ ಲಸಿಕೆ ನೀಡಿ; ಡಾ.ಕೆ.ಸುಧಾಕರ್

ಗಡಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಶೇ.100 ರಷ್ಟು ಕೋವಿಡ್ ಮೊದಲ ಡೋಸ್ ಲಸಿಕೆ ನೀಡಬೇಕು ಎಂದು ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ.ಕೆ.ಸುಧಾಕರ್ ಅವರು ನಿರ್ದೇಶನ ನೀಡಿದರು.

ಸೋಮವಾರ ಜಿಲ್ಲಾಧಿಕಾರಿಗಳೊಂದಿಗೆ ನಡೆದ ವೀಡಿಯೋ ಸಂವಾದದಲ್ಲಿ ಅವರು ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.

ದೇಶದಾದ್ಯಂತ ಕೋವಿಡ್ ಮೂರನೇ ಅಲೆಯು ಅಕ್ಟೋಬರ್ ತಿಂಗಳಲ್ಲಿ ಸಂಭವಿಸುವ ಸಾಧ್ಯತೆ ಇದ್ದು, ಪ್ರಮುಖವಾಗಿ ಗಡಿ ಜಿಲ್ಲೆಗಳು ಹೆಚ್ಚಿನ ಮುಂಜಾಗ್ರತ ಕ್ರಮಗಳನ್ನು ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರದ ಆದೇಶದಂತೆ ನೆರೆ ರಾಜ್ಯದ ಗಡಿ ಭಾಗಗಳಿಗೆ ಸೇರಿ 20 ಕಿ.ಮೀ ವ್ಯಾಪ್ತಿಯಲ್ಲಿ ಬರುವ ಸುಮಾರು 30 ಹಳ್ಳಿಗಳಲ್ಲಿ 39 ಸಾವಿರ ಜನರಿಗೆ ಸ್ವಯಂ ಪ್ರೇರಿತವಾಗಿ ವ್ಯಾಕ್ಸಿನ್ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಇದುವರೆಗೆ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಮೊದಲ ಹಂತದ ಲಸಿಕೆಯನ್ನು ಶೇ.82 ರಷ್ಟು ಪೂರ್ಣಗೊಳಿಸಲಾಗಿದ್ದು, ಮುಂದಿನ ಎರಡು ವಾರಗಳಲ್ಲಿ ಶೇ.100 ರಷ್ಟು ಸಾಧನೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.

ಕೊಡಗು ಜಿಲ್ಲೆಯಲ್ಲಿ ಪಾಸಿಟಿವಿಟಿ ಪ್ರಕರಣಗಳು ಶೇ.1.97 ಇದೆ. ಅದರ ಬಗ್ಗೆ ಶೀಘ್ರ ಕ್ರಮ ಕೈಗೊಂಡು ರ್ಯಾಟ್ ಪರೀಕ್ಷೆಯನ್ನು ಹೆಚ್ಚಿಸಲಾಗುವುದು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಗಳಲ್ಲಿ ಪೂರ್ಣ ಪ್ರಮಾಣದ ಲಸಿಕೆ ಗುರಿಯನ್ನು ಹೊಂದಲಾಗಿದೆ. ಅದರಂತೆಯೇ ಹೆಚ್ಚು ಹೆಚ್ಚು ಪ್ರಕರಣಗಳು ದಾಖಲಾಗುತ್ತಿರುವ ಪ್ರದೇಶಗಳನ್ನು ಕಂಟೈನ್‍ಮೆಂಟ್ ವಲಯಗಳನ್ನಾಗಿ ಪರಿವರ್ತಿಸಲು ಸೂಚಿಸಲಾಗಿದೆ

error: Content is protected !!