fbpx

ಗಾಂಜಾ ದಂಧೆ-ಮೂವರ ಬಂಧನ

ಗಾಂಜಾ ಮಾರಾಟ ದಂಧೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ.

ಅಂಬಟ್ಟಿ ಗ್ರಾಮದ ನಿಜಾಮುದ್ದೀನ್, ಬಿಟ್ಟಂಗಾಲದ ಸೋಮಯ್ಯ, ಕವನ್ ಮಾದಯ್ಯ ಬಂಧಿತ ಆರೋಪಿಗಳು.
ವಿರಾಜಪೇಟೆಯಲ್ಲಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಈ ತಂಡ ಪೊಲೀಸರಿಗೆ ದೊರೆತ ಖಚಿತ ಮಾಹಿತಿಯ ಅನ್ವಯ ದಾಳಿ ನಡೆಸಿ ಮೂವರನ್ನು ಬಂಧಿಸಿ 1 ಕೆ.ಜಿ 650 ಗ್ರಾಂ ಗಾಂಜಾ ಸೊಪ್ಪನ್ನು ವಶಕ್ಕೆ ಪಡೆಯಲಾಗಿದೆ.
ರಾಜ್ಯದ ವಿವಿದೆಡೆಗಳಿಂದ ಗಾಂಜಾ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಈ ತಂಡ ವಿರಾಜಪೇಟೆ ಭಾಗದಲ್ಲಿ ಚಟುವಟಿಕೆ ನಡೆಸುತ್ತಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ. ಬಂಧಿತರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

error: Content is protected !!