fbpx

ಗುಡ್ಡೆಮನೆ ಅಪ್ಪಯ್ಯ ಗೌಡ ಪ್ರತಿಮೆ ಬಳಿ ಸ್ವಾತಂತ್ರ್ಯೋತ್ಸವ

ಮಡಿಕೇರಿ,ಆ.೧೫: ಕೊಡಗು ಗೌಡ ಸಮಾಜಗಳ ಒಕ್ಕೂಟ, ಕೊಡಗು ಗೌಡ ಯುವ ವೇದಿಕೆ ಹಾಗೂ ಸಮಾಜ ಸೇವಕ ಬೆಪ್ಪುರನ ಅವಿನಾಶ್ ಕೇಸರಿ ಅವರ ಸಹಕಾರದೊಂದಿಗೆ ನಗರದ ಹುತಾತ್ಮ ಸ್ವಾತಂತ್ರö್ಯ ಹೋರಾಟಗಾರ, ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡ ಅವರ ಪ್ರತಿಮೆ ಬಳಿ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸಲಾಯಿತು.

ಫೀ.ಮಾ. ಕಾರ್ಯಪ್ಪ ಹಾಗೂ ಅಪ್ಪಯ್ಯ ಗೌಡ ಅವರುಗಳ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಧ್ವಜಾರೋಹಣ ನೆರವೇರಿಸಲಾಯಿತು. ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ಧ್ವಜಾರೋಹಣ ನೆರವೇರಿಸಿದರು. ಲಿಟಲ್ ಫ್ಲವರ್ ವಿದ್ಯಾ ಸಂಸ್ಥೆಯ ಪ್ರಾಂಶುಪಾಲೆ ಪರ್ಲಕೋಟಿ ಸೋನಾ ಪ್ರೀತು ಮಾರ್ಗದರ್ಶನದಲ್ಲಿ ವಿದ್ಯಾಥಿಗಳು ಅಪ್ಪಯ್ಯ ಗೌಡರ ಕುರಿತು ನಮನ ಗೀತೆ ಹಾಡಿದರೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯೆ ಚೊಕ್ಕಾಡಿ ಪ್ರೇಮಾ ರಾಘವಯ್ಯ, ಕೋಳಿಬೈಲು ಹರಿಣಿ ದೇಶಭಕ್ತಿಗೀತೆ ಹಾಡಿದರು. ಭಾರತ ಸೇವಾದಳದ ಜಿಲ್ಲಾ ಸಂಯೋಜಕ ರೇವಣ್ಣ, ಜಿಲ್ಲಾ ಸಮಿತಿ ನಿರ್ದೇಶಕಿ ಪುದಿಯನೆರವನ ರೇವತಿ ರಮೇಶ್, ದೈಹಿಕ ಶಿಕ್ಷಣ ಶಿಕ್ಷಕ ಸಂದೇಶ್ ಧ್ವಜಾರೋಹಣ ಕಾರ್ಯದಲ್ಲಿ ಸಹಕರಿಸಿದರು.

ಕೇಂದ್ರ ಮೀಸಲು ಪಡೆ ನಿವೃತ್ತ ಡಿಐಜಿ ಅಮೆ ಶಿವರಾಯ್, ಸಮಾಜ ಸೇವಕ ಅವಿನಾಶ್ ಕೇಸರಿ, ನಗರ ಸಭಾ ಸದಸ್ಯೆ ಕುಟ್ಟನ ಶ್ವೇತಾ ಪ್ರಶಾಂತ್, ಗೌಡ ಸಮಾಜಗಳ ಒಕ್ಕೂಟದ ಕಾರ್ಯದರ್ಶಿ ಪೇರಿಯನ ಉದಯ, ಸಹ ಕಾರ್ಯದರ್ಶಿ ಅಂಬೆಕಲ್ ನವೀನ್ ಕುಶಾಲಪ್ಪ, ಕೊಡಗು ಗೌಡ ಸಮಾಜದ ಕಾರ್ಯದರ್ಶಿ ಕೋಳುಮುಡಿಯನ ಅನಂತ್‌ಕುಮಾರ್, ಕೊಡಗು ಗೌಡ ವಿದ್ಯಾಸಂಘದ ಕಾರ್ಯದರ್ಶಿ ಕೊಟ್ಟಕೇರಿಯನ ದಯಾನಂದ್, ನಿರ್ದೇಶಕ ತಳೂರು ದಿನೇಶ್, ಕೊಡಗು ಗೌಡ ಯುವ ವೇದಿಕೆ ಅಧ್ಯಕ್ಷ ಪೈಕೇರ ಮನೋಹರ್ ಮಾದಪ್ಪ, ಖಜಾಂಚಿ ನೈಯ್ಯಣಿ ಸಂಜು, ಕ್ರೀಡಾ ಸಮಿತಿ ಅಧ್ಯಕ್ಷ ಬಾಳಾಡಿ ಮನೋಜ್, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಕುಕ್ಕೇರ ಲಕ್ಷ್ಮಣ, ನಿರ್ದೇಶಕರುಗಳಾದ ಪುದಿಯನೆರವನ ರಿಶಿತ್ ಮಾದಯ್ಯ, ಕುಟ್ಟನ ಪ್ರಶಾಂತ್, ನಡುಮನೆ ಪವನ್, ಮೂಲೆಮಜಲು ಕನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯೆ ಬೈತಡ್ಕ ಜಾನಕಿ ಬೆಳ್ಯಪ್ಪ, ಮಾಜಿ ಸದಸ್ಯೆ ಕಡ್ಲೇರ ತುಳಸಿ ಮೋಹನ್, ಕೊಡಗು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಕುಂಜಿಲನ ಮುತ್ತಮ್ಮ, ಪದಾಧಿಕಾರಿಗಳು, ಸಮಾಜ ಬಾಂಧವರು, ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

error: Content is protected !!