ಗೋಣಿಕೊಪ್ಪ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಭವನ: ಮುಂದುವರಿದ ಕಾಮಗಾರಿಗೆ ರೂ.10 ಲಕ್ಷ ಬಿಡುಗಡೆ; ಡಾ.ಸಿ.ಸೋಮಶೇಖರ

ಮಡಿಕೇರಿ ಸೆ.20: ಗೋಣಿಕೊಪ್ಪ ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಭವನಕ್ಕೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ ಅವರು ಮಂಗಳವಾರ ಭೇಟಿ ನೀಡಿ ವೀಕ್ಷಿಸಿದರು. ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಭವನದ ಕಾಮಗಾರಿ ಸ್ಥಗಿತಗೊಂಡಿರುವ ಬಗ್ಗೆ ಮಾಹಿತಿ ಪಡೆದ ಅಧ್ಯಕ್ಷರು ಗಡಿ ಪ್ರದೇಶದಲ್ಲಿ ಕನ್ನಡ ಮತ್ತು ಸಂಸ್ಕತಿಯ ಕಲಾ ಪ್ರಕಾರಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಭವನದ ಅಗತ್ಯವಿದ್ದು, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 10 ಲಕ್ಷ ರೂ. ಬಿಡುಗಡೆ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಪ್ರಕಟಿಸಿದರು
ಗಡಿ ಭಾಗದಲ್ಲಿ ವಿವಿಧ ಸಾಂಸ್ಕತಿಕ ಚಟುವಟಿಕೆ ನಡೆಸಲು ಸಭಾಭವನ ಗಡಿ ಭಾಗದಲ್ಲಿ ವಿವಿಧ ಸಾಂಸ್ಕತಿಕ ಚಟುವಟಿಕೆ ನಡೆಸಲು ಸಭಾಭವನ ಅಗತ್ಯವಿದ್ದು, ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಭವನದ ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಿಎಸ್ಆರ್ ನಿಧಿಯನ್ನು ಬಳಸಿಕೊಳ್ಳುವಂತೆ ಸಲಹೆ ಮಾಡಿದರು. ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರನ್ನು ಸ್ಮರಿಸುವುದು ಎಲ್ಲರ ಕರ್ತವ್ಯವಾಗಿದೆ. ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಭವನದಲ್ಲಿ ಕಲೆ, ಸಾಹಿತ್ಯ, ಸಾಂಸ್ಕಂತಿಕ ಚಟುವಟಿಕೆ ನಡೆಯುವಂತಾಗಬೇಕು ಎಂದು ಅಧ್ಯಕ್ಷರು ತಿಳಿಸಿದರು.
ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಭವನದ ಸಮಿತಿಯ ಅಧ್ಯಕ್ಷರಾದ ಸಿ.ಪಿ.ಬೆಳ್ಯಪ್ಪ, ನಿರ್ದೇಶಕರಾದ ಕಾಕಮಾಡ ಚಂಗಪ್ಪ, ಅಜ್ಜಿಕುಟೀರ ಶಾಂತ ಪೂಣಚ್ಚ, ಸಂಯೋಜಕರಾದ ಡಾ.ಜೆ.ಸೋಮಣ್ಣ, ಎಂ.ಎಸ್.ಕುಶಾಲಪ್ಪ ಇತರರು ಇದ್ದರು.