ಗೋಶಾಲೆಗಳಿಗೆ ನೆರವು: ಅರ್ಜಿ ಆಹ್ವಾನ

ಮಡಿಕೇರಿ: ಕೊಡಗು ಜಿಲ್ಲೆಯ ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ 2022-23 ನೇ ಸಾಲಿನ ಪಿಂಜರಪೋಲ್ ಮತ್ತು ಇತರ ಗೋಶಾಲೆಗಳಿಗೆ ನೆರವು ಅಡಿಯಲ್ಲಿ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಈ ನೆರವಿನ ಅಡಿಯಲ್ಲಿ ಪ್ರಯೋಜನ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಕೊಡಗು ಜಿಲ್ಲೆ ಮಡಿಕೇರಿ ಇವರನ್ನು ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕರಾದ ಸುರೇಶ್ ಭಟ್ ಅವರು ತಿಳಿಸಿದ್ದಾರೆ.