ಕುಶಾಲನಗರದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಉಪ ವಿಭಾಗದ ನೌಕರರು ಶ್ರೀ ಚಾಮುಂಡೇಶ್ವರಿ ವರ್ಧಂತಿ ಆಚರಿಸಲಾಯಿತು.
ಕಚೇರಿ ಆವರಣದಲ್ಲಿ ವಿಶೇಷ ಅಲಂಕಾರದೊಂದಿಗೆ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಈ ಸಂದರ್ಭ ವಿಭಾಗದ ಅಧಿಕಾರಿ ವರ್ಗ ಹಾಗೂ ಸಿಬ್ಬಂದಿಗಳು ಹಾಜರಿದ್ದರು.