fbpx

ಜನರಲ್ ತಿಮ್ಮಯ್ಯ ಜನ್ಮ ದಿನಾಚರಣೆ; ಸ್ಮಾರಕ ಭವನಕ್ಕೆ ಪ್ರವೇಶ ಉಚಿತ

ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯ ಅವರ 116 ನೇ ಜನ್ಮ ದಿನಾಚರಣೆಯು ಮಾರ್ಚ್, 31 ರಂದು ಬೆಳಗ್ಗೆ 10.30 ಗಂಟೆಗೆ ಜನರಲ್ ತಿಮ್ಮಯ್ಯ ಸ್ಮಾರಕ ಭವನ(ಸನ್ನಿಸೈಡ್)ನಲ್ಲಿ ನಡೆಯಲಿದ್ದು, ಜನರಲ್ ತಿಮ್ಮಯ್ಯ ಸ್ಮಾರಕ ಭವನ ಆವರಣದಲ್ಲಿರುವ ಅಪರೂಪದ ವಸ್ತುಗಳ (CURIO SHOP/ ಕೆಫೆಟೇರಿಯಾ) ಮಾರಾಟ ಮಳಿಗೆಯ ಉದ್ಘಾಟನಾ ಸಮಾರಂಭ ನಡೆಯಲಿದೆ.

ಆ ಪ್ರಯುಕ್ತ ಸಾರ್ವಜನಿಕರಿಗೆ ಹಾಗೂ ಶಾಲಾ ಮಕ್ಕಳಿಗೆ ಮಾರ್ಚ್, 31 ರಂದು ಸ್ಮಾರಕಕ್ಕೆ ಉಚಿತ ಪ್ರವೇಶದ ಅವಕಾಶ ಕಲ್ಪಿಸಲಾಗಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

error: Content is protected !!