ಜನೋತ್ಸವಕ್ಕೆ ಅನುದಾನ ಬಿಡುಗಡೆ

ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪದ ದಸರಾ ಜನೋತ್ಸವಕ್ಕೆ ರಾಜ್ಯ ಸರ್ಕಾರ 20 ಲಕ್ಷ ರೂ ಅನುದಾನವನ್ನು ಬಿಡುಗಡೆ ಮಾಡಿದೆ.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕೃತ ಕಚೇರಿಯಲ್ಲಿ ರಾಜ್ಯ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ,ಶಾಸಕ ಕೆ.ಜಿ ಬೋಪಯ್ಯ ಅವರು ಸಲ್ಲಿಸಿದ್ದ ಅನುದಾನದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಅನುದಾನ ಬಿಡುಗಡೆ ಮಾಡಿದ್ದಾರೆ.
ಈ ಸಂದರ್ಭ ದಸರಾ ಸಮಿತಿ ಗೌರವಾಧ್ಯಕ್ಷ ಸಿ.ಕೆ ಬೋಪಣ್ಣ, ಪ್ರಕಾಶ್ ಸೇರಿದಂತೆ ಸಮಿತಿಯ ಇತರೆ ಸದಸ್ಯರು ಹಾಜರಿದ್ದರು.