ಜನ-ಜಾನುವಾರುಗಳಿಗೆ ಜಲಾಶಯದಿಂದ ನೀರು ಬಿಡುಗಡೆ


ಬೇಸಿಗೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಕುಶಾಲನಗರ ತಾಲ್ಲೂಕಿಗೆ ಒಳಪಡುವ ಕಾವೇರಿ ಜಲಾನಯನ ಪ್ರದೇಶದ ಹಾರಂಗಿ ಜಲಾಶಯದಿಂದ 300 ಕ್ಯೂಸೆಕ್ ನಾಲೆಗಳ ನೀರನ್ನು ಹೊರಬಿಡಲಾಗಿದೆ.

ಜನ ಜಾನುವಾರುಗಳಿಗೆ ಅವಶ್ಯವಿರುವ 300 ಕ್ಯೂಸೆಕ್ ಪ್ರಮಾಣದ ನೀರನ್ನು ಬಿಡಲಾಗುತ್ತಿದ್ದು, ಹಾರಂಗಿ ಅಚ್ಚುಕಟ್ಟು ಪ್ರದೇಶದ ರೈತಾಪಿ ವರ್ಗದವರು,ಸುತ್ತಮುತ್ತಲಿನ ಗ್ರಾಮಸ್ಥರು ಇದರ ಸದ್ಬಳಕೆ ಮಾಡಿಕೊಳ್ಳಬಹುದಾಗಿದ್ದು ,ಜೊತೆಗೆ ಎಚ್ಚರಿಕೆ ವಹಿಸುವಂತೆ ಹಾರಂಗಿ ಅಣೆಕಟ್ಟು ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.