ಜಿಲ್ಲಾಧಿಕಾರಿಗಳೊಂದಿಗೆ ಸಿ.ಎಂ ವಿಡಿಯೋ ಸಂವಾದ

ಮುಂಗಾರವಿನಲ್ಲಿ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳು ಮಾಹಿತಿ, ಕಳೆದ 10 ದಿನಗಳಿಂದ ಉಂಟಾದ ಮಳೆ ಹಾನಿಯ ಬಗ್ಗೆ ಜಿಲ್ಲಾಧಿಕಾರಿ ಅವರಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಹಿತಿ ಪಡೆದರು,
ಸರ್ಕಾರದಿಂದ ಪ್ರವಾಹಪೀಡಿತ ಜಿಲ್ಲೆಗಳಿಗೆ ಬೇಕಾದ ಸೌಲಭ್ಯಗಳನ್ನು ಕಲ್ಪಿಸಿದ್ದು,
ಹೆಚ್ಚು ಮಳೆಯಿಂದ ಹಾನಿಗೊಳಗಾದ ಬೆಳೆಗಳಿಗೆ ಪರಿಹಾರ,ಉಚಿತವಾಗಿ ಬಿತ್ತನೆ ಬೀಜ,ಪ್ರವಾಹ ತಡೆಯಲು ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಿ.ಎಂ ಭರವಸೆ ನೀಡಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಸರಾಸರಿ 744.7 ಮಿಮೀ ಮಳೆಯಾಗಿದ್ದು , ಜುಲೈ 14 ಮತ್ತು 15 ರಂದು ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದ ಒಬ್ಬರ ಸಾವು,
4 ವನ್ಯ ಜೀವಿ ಸಾವು, 2 ಮನೆಗಳು ಸಂಪೂರ್ಣ ನಾಶ, 36 ಮನೆಗಳು ಭಾಗಶಃ ಹಾನಿಯಾಗಿರುವುದಾಗಿ ಅವರು ಜಿಲ್ಲಾಧಿಕಾರಿ ತಿಳಿಸಿದರು. ಜಿಲ್ಲೆಯಲ್ಲಿ 70 ಪ್ರವಾಹ ಪೀಡಿತ ಪ್ರದೇಶಗಳು ಎಂದು ಗುರುತಿಸಲಾಗಿದ್ದು
85 ಕಾಳಜಿ ಕೇಂದ್ರಗಳಲ್ಲಿ ತಾತ್ಕಾಲಿಕ ಆಶ್ರಯ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು
ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮಾಹಿತಿ ನೀಡಿದರು.

error: Content is protected !!