fbpx

ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ರಿವರ್ ರಾಫ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆ

ರಿವರ್ ರಾಪ್ಟಿಂಗ್ ನಡೆಸುವಲ್ಲಿ ಹೊಸದಾಗಿ ಸಲ್ಲಿಕೆಯಾಗಿರುವ ಅರ್ಜಿಗಳ ಸಂಬಂಧ ಸ್ಥಳ ಪರಿಶೀಲಿಸಿ ಮುಂದಿನ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಿವರ್ ರಾಪ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಾಂತಳ್ಳಿ ಹೋಬಳಿ ಕುಮಾರಹಳ್ಳಿ ಗ್ರಾಮದ ಕುಮಾರಧಾರ ನದಿಯಲ್ಲಿ ಮತ್ತು ಕುಶಾಲನಗರ ತಾಲ್ಲೂಕಿನ ಕಾವೇರಿ ನದಿಯ ತೆಪ್ಪದಕಂಡಿಯಲ್ಲಿ ಹೊಸದಾಗಿ ರಿವರ್ ರಾಪ್ಟ್ ನಡೆಸಲು ಅರ್ಜಿ ಸಲ್ಲಿಕೆಯಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ಯತೀಶ್ ಉಳ್ಳಾಲ್ ಮಾಹಿತಿ ನೀಡಿದರು.
ದುಬಾರೆ ಮತ್ತು ಬರ್ಪುಹೊಳೆಯಲ್ಲಿ ರಿವರ್ ರಾಪ್ಟಿಂಗ್ ಪರವಾನಿಗೆ ನವೀಕರಿಸುವ ಸಂಬಂಧ ರಿವರ್ ರಾಪ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನಂತರ ನವೀಕರಣ ಮಾಡಲು ರಿವರ್ ರಾಪ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು.

ದುಬಾರೆಯಲ್ಲಿ 13 ಮತ್ತು ಬರ್ಪುಹೊಳೆಯಲ್ಲಿ 03 ರಿವರ್ ರಾಪ್ಟಿಂಗ್ ಪರವಾನಿಗೆ ನವೀಕರಿಸಲು ಒಟ್ಟು 16 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಸಂಬಂಧ ಪರಿಶೀಲಿಸಿ ಪರವಾನಿಗೆ ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.

error: Content is protected !!