ಜಿಲ್ಲೆಯಲ್ಲಿ ಸದ್ಯಕ್ಕೆ ಲಾಕ್ಡೌನ್ ಸಡಿಲಿಕೆಯಿಲ್ಲ: ಡೆಲ್ಟಾ ಪತ್ತೆಯಾಗಿಲ್ಲ- ಡಿ.ಸಿ

ಕೊಡಗು ಜಿಲ್ಲೆಯಲ್ಲಿ ಸದ್ಯಕ್ಕೆ ಲಾಕ್ಡೌನ್ ಸಡಿಲಿಕೆ ಮಾಡುವ ನಿರ್ಧಾರ ಕೈಗೊಂಡಿಲ್ಲ,ಈಗಾಗಲೇ ವಾರಕ್ಕೆ ಮೂರು ದಿನಗಳ ಕಾಲ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಿರುವ ಮಾರ್ಗಸೂಚಿಗಳೇ ಮುಂದುವರೆಯಲಿದ್ದು,ಮಳೆಗಾಲದಲ್ಲಿ ಬೇಕಾಗುವ ವಸ್ತುಗಳ ಖರೀದಿಗೆ ಜಿಲ್ಲೆಯಲ್ಲಿ ಅವಕಾಶ ಮಾಡಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.ಮಡಿಕೇರಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು ಸರ್ಕಾರದ ನಿರ್ಧಾರದಂತೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು,ಜಿಲ್ಲೆ ಎರಡನೇ ಪಟ್ಟಿಯಲ್ಲಿರುವುದರಿಂದ,ಮುಂಬರುವ ಮೂರನೇ ಅಲೆಯನ್ನು ಮುಂದಿಟ್ಟುಕೊಂಡು ಮಾರ್ಗಸೂಚಿಗಳನ್ನು ಶಾಸಕರು ಮತ್ತು ಉಸ್ತುವಾರಿ ಸಚಿವರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದೆಂದರು.

ಇನ್ನು ಕೊರೋನಾ ಜೊತೆ ಡೆಲ್ಟಾ ಸೋಂಕು ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು,ಸದ್ಯಕ್ಕೆ ಅಂತಹಾ ಯಾವುದೇ ಲಕ್ಷಣ ಕಂಡು ಬಂದಿಲ್ಲ ಎಂದರು.

error: Content is protected !!