ಜಿಲ್ಲೆಯಲ್ಲಿ ಸ್ಪೆಷಾಲಿಟಿ ಆಸ್ಪತ್ರೆ ಶೀಘ್ರ ಪ್ರಾರಂಭ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 300 ಹಾಸಿಗೆ ಸಾಮಥ್ಯ೯ವಿರುವ ಜಿಲ್ಲಾ ಆಸ್ಪತ್ರೆ ಕಾರ್ಯ ನಿರ್ವಹಿಸುತ್ತಿದೆ. ಇದನ್ನು ಈಗಾಗಲೇ ಮತ್ತೆ 450 ಹಾಸಿಗೆಯ ಸಾಮಥ್ಯ೯ವಿರುವ ಆಸ್ಪತ್ರೆಯನ್ನಾಗಿ ಪರಿವರ್ತಿಸಲು ಕಾಮಗಾರಿ ಪ್ರಗತಿಯಲ್ಲಿದೆ.

ಈ ಕೆಲಸ ತ್ವರಿತವಾಗಿ ಪೂರ್ಣಗೊಳಿಸಿ ಶೀಘ್ರದಲ್ಲಿ ಸೇವೆಗೆ ಮುಕ್ತಗೊಳಿಸುವ ನಿಟ್ಟಿನಲ್ಲಿ ಸಭೆಯನ್ನೂ ನಡೆಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ|| ಸುಧಾಕರ್ ಅವರು ಮಾಹಿತಿ ನೀಡಿದರು. ಸದಸ್ಯ ಸುಜಾ ಕುಶಾಲಪ್ಪ ಅವರು ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಅಗತ್ಯದ ಕುರಿತು ಮಾಡಿದ ಪ್ರಸ್ತಾವನೆಗೆ ಸಚಿವರು ಉತ್ತರಿಸಿದರು. ಸೂಕ್ತ ಆಸ್ಪತ್ರೆ ವ್ಯವಸ್ಥೆಯಿಲ್ಲದೆ ಕೊಡಗಿನ ಜನರು ಮೈಸೂರು-ಮಂಗಳೂರನ್ನು ಅವಲಂಬಿಸಬೇಕಾಗಿದ್ದು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಜಿಲ್ಲೆಯಲ್ಲಿ ಬೇಕೆಂದು ಪ್ರಸ್ತಾಪಿಸಿದ್ದರು.

error: Content is protected !!