ಜಿಲ್ಲೆಯಲ್ಲಿ ಸ್ವಾತಂತ್ರ್ಯ ಸಂಭ್ರಮಾಚರಣೆ

ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯ ಕೋಟೆ ಆವರಣದಲ್ಲಿ ನಡೆದ ಸರಳ ಸಮಾರಂಭಕ್ಕೆ ಧ್ವಜಾರೋಹಣ ಮೂಲಕ ನೂತನ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಚಾಲನೆ ನೀಡಿದರು.
ಉಭಯ ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜಿ ಬೋಪಯ್ಯ, ಎಂಎಲ್ಸಿ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ ಭಾಗಿಯಾಗಿದ್ದರು.
ರಾಷ್ಟ್ರಗೀತೆ, ನಾಡಗೀತೆ, ರೈತ ಗೀತೆ ಜೊತೆಗೆ ಪೊಲೀಸ್ ಪಥಸಂಚಲನ ನಡೆಯಿತು. ದೇಶೀಯ ಪಂಚೆಯುಟ್ಟು ಆಗಮಿಸಿದ ಉಸ್ತುವಾರಿ ಸಚಿವರು ಕಂಗೊಳಿಸಿದರು.
ಹಿರಿಯರ ಬಲಿದಾನ ನಮ್ಮ ಭವಿಷ್ಯಕ್ಕೆ ಮಾರ್ಗದರ್ಶನ ಮತ್ತು ನಮ್ಮ ದೇಶ ಎನ್ನುವ ಪರಿಕಲ್ಪನೆ ಬರಬೇಕು. ಶಾಲೆಗಳು ಆರಂಭದ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.