fbpx

ಜಿಲ್ಲೆಯಲ್ಲಿ 6906 ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು

ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸಜ್ಜಾಗುತ್ತಿರುವ ಕೊಠಡಿ

ನಾಳೆಯಿಂದ ಎಸ್ಸೆಸೆಲ್ಸಿ ಪರೀಕ್ಷೆಗಳು ಆರಂಭವಾಗಲಿದ್ದು ಜಿಲ್ಲೆಯಲ್ಲಿ 6906 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ 3,462 ಬಾಲಕರು ಹಾಗೂ 3,384 ಬಾಲಕೀಯರು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯಲ್ಲಿ 41 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು ಮಡಿಕೇರಿ ತಾಲ್ಲೂಕಿನ 2,041 ವಿದ್ಯಾರ್ಥಿಗಳಿಗೆ 13,ಸೋಮವಾರಪೇಟೆ ತಾಲ್ಲೂಕಿನಲ್ಲಿ 2,703 ವಿದ್ಯಾರ್ಥಿಗಳಿಗೆ 17 ಮತ್ತು ವಿರಾಜಪೇಟೆ ತಾಲ್ಲೂಕಿನ 2,162 ವಿದ್ಯಾರ್ಥಿಗಳಿಗೆ 11 ಕೇಂದ್ರಗಳನ್ನು ತೆರೆಯಲಾಗಿದೆ. ಕೊವಿಡ್ ನಿಯಮದಂತೆ ಪ್ರತಿ ಕೊಠಡಿಯಲ್ಲಿ 12 ವಿದ್ಯಾರ್ಥಿಗಳಂತೆ ಪರೀಕ್ಷೆ ಬರೆಯಲಿದ್ದಾರೆ. ಪ್ರಥಮ ಹಂತದ ಲಸಿಕೆ ಪಡೆದ 1352 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

error: Content is protected !!