fbpx

ಜು.05 ರಂದು ಕೋವಿಡ್ ಲಸಿಕಾ ಅಭಿಯಾನ

-ಕರ್ನಾಟಕ ಸರ್ಕಾರ, ಕಾಲೇಜು ಶಿಕ್ಷಣ ಇಲಾಖೆ, ಮಂಗಳೂರು ವಿಶ್ವವಿದ್ಯಾಲಯ ಮತ್ತು ಕೊಡಗು ಜಿಲ್ಲಾ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಜುಲೈ, 05 ರಂದು ಬೆಳಗ್ಗೆ 10 ಗಂಟೆಗೆ ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಮತ್ತು ವಿರಾಜಪೇಟೆ ಕಾವೇರಿ ಪದವಿ ಕಾಲೇಜು ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಉಚಿತ ಕೋವಿಡ್ ಲಸಿಕಾ ಅಭಿಯಾನವನ್ನು ಆಯೋಜಿಸಲಾಗಿದೆ.
ಲಸಿಕೆ ಪಡೆಯುವ ವಿದ್ಯಾರ್ಥಿಗಳು ಬೋಧಕ ವರ್ಗ ಮತ್ತು ಬೋಧಕೇತರ ಸಿಬ್ಬಂದಿ ವರ್ಗವು ಕಡ್ಡಾಯವಾಗಿ ಕಾಲೇಜಿನ ಗುರುತಿನ ಪತ್ರ, ಆಧಾರ್ ಕಾರ್ಡ್, ಮತ್ತು ದೂರವಾಣಿ ಸಂಖ್ಯೆಯೊಂದಿಗೆ ಹಾಜರಾಗಬೇಕು. ದೂರದ ಊರಿನಿಂದ ಬರುವ ವಿದ್ಯಾರ್ಥಿಗಳು ಚೆಕ್ ಪೋಸ್ಟ್‍ಗಳಲ್ಲಿ ಕಾಲೇಜಿನ ಗುರುತಿನ ಚೀಟಿಯನ್ನು ತೋರಿಸಿ ಲಸಿಕಾಕರಣಕ್ಕೆ ತೆರಳಬಹುದಾಗಿದೆ.

error: Content is protected !!