ಜೂನ್ 1ರಿಂದ ರಾಜ್ಯಕ್ಕೆ ಮುಂಗಾರು ಪ್ರವೇಶ

2021ರ ಮುಂಗಾರು ಮಾರುತಗಳು ರಾಜ್ಯಕ್ಕೆ ವಾಡಿಕೆಗಿಂತ ಮುಂಚೆಯೇ ಪ್ರವೇಶಿಸಲಿವೆ. ಮೇ 31 ರಂದು ಕೇರಳಕ್ಕೆ ಆಗಮಿಸಲಿದ್ದು, ನಂತರ ಮಾರುತಗಳು ಪ್ರಬಲವಾದರೆ ಬಹುತೇಕ ಅಂದಿನ ದಿನ ಇಲ್ಲವೇ ಜೂ.1 ರಂದು ಕರ್ನಾಟಕ ಪ್ರವೇಶಿಸಲಿವೆ ಎಂದು ಹವಮಾನ ಇಲಾಖೆ ತಿಳಿಸಿದೆ.ಕಳೆದ ಬಾರಿ ಜೂನ್ 4 ರಂದು ಮುಂಗಾರು ಪ್ರವೇಶಿಸಿತ್ತು.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಧಾರವಾಡ, ಗದಗ, ಕೊಪ್ಪಳ, ಹಾವೇರಿ, ದಾವಣಗೆರೆ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬೀಳಲಿದೆ.ಂಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಮಂಡ್ಯ, ಮೈಸೂರು, ಚಾಮರಾಜನಗರ ಮತ್ತು ಬಳ್ಳಾರಿಯಲ್ಲಿ ವಾಡಿಕೆಯಷ್ಟೆ ಮಳೆಯಾಗಲಿದೆ ಎಂದು ಹವಾಮಾನ ತಜ್ಞ ಡಾ.ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.