ಜೂನ್ 11 ರಂದು ಜಿಲ್ಲೆಗೆ ಉಸ್ತುವಾರಿ ಸಚಿವ ವಿ. ಸೋಮಣ್ಣ

ಕೊಡಗು: ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಇದೇ 11 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಚಿವರು ಜೂನ್ 11 ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ನಿಯಂತ್ರಣ ಹಾಗೂ ಸೋಂಕಿತರ ಚಿಕಿತ್ಸೆಗೆ ಸಂಬಂಧಿಸಿದಂತೆ ಕೈಗೊಂಡ ಮುಂಜಾಗ್ರತ ಕ್ರಮಗಳ ಕುರಿತು ಹಾಗೂ ಮಳೆಯ ಹಿನ್ನಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾಧಿಕಾರಿಯವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜತೆ ಪರಿಶೀಲನಾ ಸಭೆ ನಡೆಸಲಿದ್ದು, ಬಳಿಕ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಗ್ರಾಮದಲ್ಲಿ ಪ್ರವಾಹ ಸಂತ್ರಸ್ಥರಿಗಾಗಿ ನಿರ್ಮಾಣ ಮಾಡಿರುವ 22 ಮನೆಗಳ ಪಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಿದ್ದಾರೆ.

ಬಳಿಕ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪ್ರಾರಂಭವಾಗಿರುವ ಕೋವಿಡ್-19 ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಹಾಗೂ ವಿವಿಧ ಕೋವಿಡ್ ಕೇರ್ ಸೆಂಟರ್ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.
ನಂತರ ಸಂಜೆ 4 ಗಂಟೆಗೆ ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಯಲ್ಲಿ ನೂತನವಾಗಿ ಪ್ರಾರಂಭಿಸಲಾಗುತ್ತಿರುವ ಆಕ್ಷಿಜನ್ ಜನರೇಷನ್ ಪ್ಲಾಂಟ್‍ನ ಪರಿವೀಕ್ಷಣೆ ನಡೆಸಲಿದ್ದಾರೆ.
ಬಳಿಕ ಸಂಜೆ 5 ಗಂಟೆಗೆ ಪಾಲಿಬೆಟ್ಟದಲ್ಲಿ ‘ಡಾಕ್ಟರ್ ಫಾರ್ ಯು’ ಎನ್‍ಜಿಒ ಸಹಯೋಗದಲ್ಲಿ ಆರಂಭಿಸಿರುವ ಡಿಸಿಎಚ್‍ಸಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಉಸ್ತುವಾರಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಟಿ.ಎನ್.ರವಿಪ್ರಕಾಶ್ ಅವರು ತಿಳಿಸಿದ್ದಾರೆ.

error: Content is protected !!