ಜೆಡಿಎಸ್ ಇಂದ ಪ್ರತಿಭಟನೆ

ಕೊಡಗು ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಕೊರತೆಯಿದ್ದು, ರಾಜ್ಯ ಹಾಗು ಕೇಂದ್ರ ಸರ್ಕಾರ ಸಮರ್ಪಕವಾಗಿ ಲಸಿಕೆ ನೀಡುತ್ತಿಲ್ಲ ಮತ್ತು ಪೆಟ್ರೋಲ್, ಡೀಸಲ್ ಬೆಲೆ ಏರಿಕೆ ವಿರೋಧಿಸುತ್ತೇವೆ ಎಂದು ವಿವಿಧ ಜೆಡಿಎಸ್ ಘಟಕಗಳು ಕೇಂದ್ರ ಹಾಗು ರಾಜ್ಯ ಸರ್ಕಾರದ ವಿರುದ್ಧ ಕುಶಾಲನಗರ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದವು.
ಸ್ಥಳೀಯ ಶಾಸಕರು ಕನಿಷ್ಟ ಕೋವಿಡ್ ಸಂಬಂಧ ಸಭೆಗಳನ್ನು ನಡೆಸಿದ್ದಾರೆ. ಆದರೆ ಸಂಸದ ಪ್ರತಾಪ್ ಸಿಂಹ ಜಿಲ್ಲೆಯತ್ತ ತಲೆಯೇ ಹಾಕುತ್ತಿಲ್ಲ ಎಂದು ಆರೋಪಿಸಿದರು.