ಜೈಲಿನಿಂದಲೇ ಚುನಾವಣೆಗೆ ಸ್ಪರ್ಧಿಸಿ ಜಯಭೇರಿ ಸಾಧಿಸಿದ ಅಭ್ಯರ್ಥಿ!

ಕೊಡಗು: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಜೈಲಿನಿಂದ ಸ್ಪರ್ಧಿಸಿದ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಎಮ್ಮೆಗುಂಡಿಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಎಮ್ಮೆಗುಂಡಿಯ ಬಿಜೆಪಿ ಅಭ್ಯರ್ಥಿ ಪುಲಿಯಂಡ ಬೋಪಣ್ಣ ಜೈಲಿನಲ್ಲಿದ್ದುಕೊಂಡೇ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ಇನ್ನೇನು ಪ್ರಚಾರದ ಅಂತ್ಯದಲ್ಲಿ ಜೈಲಿನಿಂದ ಬಿಡುಗಡೆಗೊಂಡು ಪ್ರಚಾರ ಕೈಗೊಂಡಿದ್ದರು. ಇದೀಗ, ಸತತ ನಾಲ್ಕನೇ ಬಾರಿಗೆ ಜಯ ಗಳಿಸಿದ್ದಾರೆ.

error: Content is protected !!