ಡಿ.ಸಿ ರೋಹಿಣಿ ಸಿಂಧೂರಿ ವರ್ಗಾವಣೆ ತಡೆ ಕೋರಿ ಸಿ.ಎಂಗೆ ಮನವಿ

ಬೆಂಗಳೂರು: ಮೈಸೂರು ಡಿ.ಸಿ.ರೋಹಿಣಿ ಸಿಂಧೂರಿ ಹಾಗೂ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಸಂಘರ್ಷಕ್ಕೆ ಇಬ್ಬರು ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿತ್ತು. ಇದರ ಬೆನ್ನಲ್ಲೇ ಈಗ ರೋಹಿಣಿ ಸಿಂಧೂರಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

ವರ್ಗಾವಣೆ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾದ ಸಿಂಧೂರಿ, ಅರ್ಧಗಂಟೆ ಕಾಲ ಮಾತುಕತೆ ನಡೆಸಿದ್ದಾರೆ. ವರ್ಗಾವಣೆ ಆದೇಶಕ್ಕೆ ತಡೆ ನೀಡುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ಪ್ರಕರಣದಲ್ಲಿ ತಮ್ಮದೇನೂ ತಪ್ಪಿಲ್ಲ ಎಂಬ ಬಗ್ಗೆ ಮನವರಿಕೆ ಪತ್ರ ಸಲ್ಲಿಸಿದ್ದಾರೆ.

ಆದರೆ ಈ ವೇಳೆ ಸಿಎಂ ವರ್ಗಾವಣೆ ಆದೇಶಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ ಎಂದು ಹೇಳಲಾಗಿದೆ. ಒಟ್ಟಾರೆ ಇಬ್ಬರು ಮಹಿಳಾ ಅಧಿಕಾರಿಗಳ ಜಡೆ ಜಗಳ ವರ್ಗಾವಣೆಯಲ್ಲಿ ಕೊನೆಯಾಗುವ ಸಾಧ್ಯತೆಯಿದೆ.

error: Content is protected !!