fbpx

ತಾಲ್ಲೂಕು ಮಟ್ಟದ ಹಾಕಿ ಕ್ರೀಡಾಕೂಟ

ಪದವಿ ಪೂರ್ವ ಶಿಕ್ಷಣ ಇಲಾಖೆಯ ತಾಲ್ಲೂಕು ಮಟ್ಟದ ಹಾಕಿ ಕ್ರೀಡಾ ಕೂಟವು ಶನಿವಾರ ಭಾರತೀಯ ಕ್ರೀಡಾ ಪ್ರಾಧಿಕಾರದ ಮೈದಾನದಲ್ಲಿ ನಡೆಯಿತು.

ಕ್ರೀಡಾಕೂಟವನ್ನು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ್ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ತಂಡದ ವ್ಯವಸ್ಥಾಪಕರಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಚಿದಾನಂದ, ಸೋಮಶೇಖರ ದೈಹಿಕ ಶಿಕ್ಷಣ ಉಪನ್ಯಾಸಕರಾದ ಗಿರಿಧರ್, ನಾಚಪ್ಪ, ಜಾನಕಿ ಅವರು ಭಾಗವಹಿಸಿದ್ದರು.

ಬಾಲಕರ ವಿಭಾಗದಲ್ಲಿ ಸೈಂಟ್ ಜೋಸೆಫ್ ಪದವಿ ಪೂರ್ವ ಕಾಲೇಜಿನ ತಂಡ ಪ್ರಥಮ ಸ್ಥಾನ ಪಡೆದಿದ್ದಾರೆ. ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿನ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿತು.

ಬಾಲಕಿಯರ ವಿಭಾಗದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ತಂಡವು ಪ್ರಥಮ ಸ್ಥಾನ ಪಡೆದುಕೊಂಡಿತು. ಸೈಂಟ್ ಮೈಕೆಲ್ ಪದವಿ ಪೂರ್ವ ಕಾಲೇಜಿನ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದೆ.

error: Content is protected !!