ತಿಮ್ಮಯ್ಯ ವೃತ್ತದಲ್ಲಿ ನಡೆದ ಬೃಹತ್ ಪ್ರತಿಭಟನೆ

ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯನ್ನು ಖಂಡಿಸಿ ಮಡಿಕೇರಿಯಲ್ಲಿ ವಿಶ್ವ ಹಿಂದು ಪರಿಷತ್, ಭಜರಂಗದಳ, ದುರ್ಗಾವಾಹಿನಿ, ಮತ್ತು ಮಾತೃ ಶಕ್ತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ಘಟನೆ ವಿರೋಧಿಸಿ, ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಹರ್ಷ ಹತ್ಯೆ ಖಂಡಿಸಿ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ನೂರಾರು ಹಿಂದು ಪರ ಸಂಘಟನೆ ಕಾರ್ಯಕರ್ತರು ಮುಖಂಡರು ಆರೋಪಿಗೂ ವಿರುದ್ಧ ಘೋಷಣೆ ಕೂಗಿದರು. ಬಳಿಕ ಮೃತ ಹರ್ಷ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಲಾಯಿತು.

error: Content is protected !!