ದಂಪತಿ ಕಲಹ; ಪತಿಯಿಂದ ಪತ್ನಿ ಕೊಲೆ

ಮಡಿಕೇರಿ ಆ.10 : ದಂಪತಿಯ ಕಲಹ ಪತ್ನಿಯ ಸಾವಿನಲ್ಲಿ ಅಂತ್ಯವಾದ ಘಟನೆ ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ ಚೇರಳ ಶ್ರೀಮಂಗಲ ಗ್ರಾಮದಲ್ಲಿ ನಡೆದಿದೆ.

ಬಟ್ಟೇರ ಷಷ್ಮಾ (44) ಎಂಬುವವರು ಗುಂಡೇಟಿನಿಂದ ಮೃತಪಟ್ಟಿದ್ದು, ಪತಿ ಬಟ್ಟರ ಗೋಪಾಲ (ಕಿಶನ್) ಗುಂಡು ಹಾರಿಸಿರುವುದಾಗಿ ಆರೋಪಿಸಲಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸರು ಆರೋಪಿ ಗೋಪಾಲನನ್ನು ವಶಕ್ಕೆ ಪಡೆದಿದ್ದಾರೆ.

ಮಂಗಳವಾರ ರಾತ್ರಿ ಇಬ್ಬರ ನಡುವೆ ಕಲಹ ಏರ್ಪಟ್ಟು ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಭೇಟಿ ನೀಡಿ ಪರಿಶೀಲಿಸಿದರು.

error: Content is protected !!