ದಿ.18ರಂದು ಕಟ್ಟಡ ಉದ್ಘಾಟನೆ

ಮಡಿಕೇರಿ: ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದಾವಣಗೆರೆಯ ಚನ್ನಗಿರಿಯ ತೋಟ ಉತ್ಪನ್ನಗಳ ಮಾರಾಟ ಸಹಕಾರ ಸಂಘದಿಂದ ಉದ್ಘಾಟನಾ ಸಮಾರಂಭ ದಿ.18ರಂದು ಬೆಳಿಗ್ಗೆ 10 ಗಂಟೆಗೆ ನೆರವೇರಲಿದೆ. ಜಿಲ್ಲಾಧಿಕಾರಿ ಬಿ.ಸಿ ಸತೀಶ್ ಅವರು ಉದ್ಘಾಟಿಸಲಿದ್ದಾರೆ.

ಅಧ್ಯಕ್ಷತೆಯನ್ನು ಚನ್ನಗಿರಿ ತೋಟ ಉತ್ಪನ್ನಗಳ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಆರ್.ಎಂ ರವಿ ಅಜ್ಜಿಹಳ್ಳಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರಾದ ಎಂ.ಪಿ ಅಪ್ಪಚ್ಚುರಂಜನ್, ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಟ್ಟರಾಜು, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎ.ಪಿ ಧನಂಜಯ್, ಶಕ್ತಿ ದಿನಪತ್ರಿಕೆಯ ವ್ಯವಸ್ಥಾಪಕಿ ಜಿ.ಆರ್ ಪ್ರಜ್ಞಾ ಭಾಗವಹಿಸಲಿದ್ದಾರೆ. ಪ್ರಾಂಶುಪಾಲರಾದ ವಿಜಯ್ ಪಿ.ಆರ್ ಹಾಜರು ಇರಲಿದ್ದಾರೆ.

error: Content is protected !!