ದುಬಾರಿಯಾದ ಅಡುಗೆ ಎಣ್ಣೆ ದರ!

ರಷ್ಯಾ -ಉಕ್ರೇನ್ ಯುದ್ಧದ ಪರಿಣಾಮ ದೇಶೀಯ ಮಾರುಕಟ್ಟೆ ಮೇಲೆ ಉಂಟಾಗಿದೆ. ಯುದ್ಧ ಆರಂಭವಾಗಿ 12 ದಿನಗಳಾಗಿದ್ದು, ಕಾಳಸಂತೆಕೋರರು ಪರಿಸ್ಥಿತಿಯ ಲಾಭ ಪಡೆದುಕೊಂಡಿದ್ದು, ಸೂರ್ಯಕಾಂತಿ ಅಡುಗೆ ಎಣ್ಣೆ ದರವನ್ನು ಒಂದು ವಾರದಲ್ಲಿ 100 ರೂಪಾಯಿ ಹೆಚ್ಚಳ ಮಾಡಿದ್ದಾರೆ.

ಕೃತಕ ಅಭಾವ ಸೃಷ್ಟಿಸಿ ಸೂರ್ಯಕಾಂತಿ ಎಣ್ಣೆ ದರದಲ್ಲಿ 100 ರೂಪಾಯಿ ಹೆಚ್ಚಳ ಮಾಡಲಾಗಿದೆ. ಒಂದು ವಾರದಲ್ಲಿ ಸೂರ್ಯಕಾಂತಿ ಎಣ್ಣೆ 100 ರೂಪಾಯಿಯಷ್ಟು ಹೆಚ್ಚಾಗಿರುವುದು ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿದೆ. ವಾರದ ಹಿಂದೆ ಒಂದು ಲೀಟರ್ ಸೂರ್ಯಕಾಂತಿ ಎಣ್ಣೆ 110 ರಿಂದ 140 ರೂಪಾಯಿವರೆಗೂ ಮಾರಾಟವಾಗುತ್ತಿತ್ತು. ಒಂದು ವಾರದ ನಂತರ ಈಗ 170 ರೂಪಾಯಿಯಿಂದ 220 ರೂಪಾಯಿವರೆಗೂ ಮಾರಾಟವಾಗುತ್ತಿದೆ. ಯುದ್ಧದ ಹೆಸರಲ್ಲಿ ಕಾಳಸಂತೆಕೋರರು ಅಡುಗೆ ಎಣ್ಣೆ ದಾಸ್ತಾನು ಮಾಡಿಕೊಳ್ಳತೊಡಗಿದ್ದು, ಕೃತಕ ಅಭಾವ ಸೃಷ್ಟಿಸಿ ಬೆಲೆ ಏರಿಕೆ ಮಾಡತೊಡಗಿದ್ದಾರೆ ಎನ್ನಲಾಗಿದೆ.

ದೇಶದಲ್ಲಿ 2 -3 ತಿಂಗಳಿಗಾಗುವಷ್ಟು ಅಡುಗೆ ಎಣ್ಣೆ ದಾಸ್ತಾನು ಇದ್ದರೂ ಕೂಡ ಸೂರ್ಯಕಾಂತಿ ಎಣ್ಣೆಯಲ್ಲಿ ಕೃತಕ ಅಭಾವ ಸೃಷ್ಟಿಸಿ ಈ ರೀತಿ ಬೆಲೆ ಏರಿಕೆ ಮಾಡಲಾಗಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಯುದ್ಧದ ಪರಿಣಾಮ ಸೂರ್ಯಕಾಂತಿ ಎಣ್ಣೆ ಆಮದು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ದರ ಏರಿಕೆಯಾಗಿದೆ. ದರ ಇನ್ನಷ್ಟು ಏರಿಕೆಯಾಗಬಹುದು ಎನ್ನುವ ಕಾರಣಕ್ಕೆ ಅನೇಕರು ಸೂರ್ಯಕಾಂತಿ ಎಣ್ಣೆ ಖರೀದಿಗೆ ಮುಗಿಬಿದ್ದಿದ್ದು ಕೂಡ ಬೆಲೆ ಏರಿಕೆಗೆ ಕಾರಣವೆನ್ನಲಾಗಿದೆ.

error: Content is protected !!