fbpx

ದೆಹೆಲಿ ಗಲಭೆ ಆರೋಪಿ ಖಾಲಿದ್ಗೆ ಜಾಮೀನು ನಿರಾಕರಣೆ

ನವದೆಹಲಿ, ಮಾ 24 – ಕಳೆದ 2020 ರಲ್ಲಿ ನಡೆದಿದ್ದ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಜೆಎನ್‍ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್‍ಗೆ ದೆಹಲಿ ನ್ಯಾಯಾಲಯ ನಿನ್ನೆಯ ದಿನ ಜಾಮೀನು ನಿರಾಕರಿಸಿದೆ.

ಹೆಚ್ಚುವರಿ ಸೆಷನ್ಸ ನ್ಯಾಯಾಧೀಶ ಅಮಿತಾಭ್ ರಾವತ್ ಅವರು ಖಾಲಿದ್ ಮತ್ತು ಪ್ರಾಸಿಕ್ಯೂಷನ್ ಪರ ವಕೀಲರ ವಾದವನ್ನು ಆಲಿಸಿದ ನಂತರ ಮಾರ್ಚ್ 3 ರಂದು ಆದೇಶವನ್ನು ಕಾಯ್ದಿರಿಸಿದ್ದರು.

ವಾದದ ಸಮಯದಲ್ಲಿ, ಆರೋಪಿಯು ತನ್ನ ವಿರುದ್ಧದ ಪ್ರಕರಣವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ಸಾಕ್ಷ್ಯಾಧಾರಗಳ ಕೊರತೆಯಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಫೆಬ್ರವರಿ 2020 ರ ಗಲಭೆಯ ಮಾಸ್ಟರ್‍ಮೈಂಡ್ ಎನ್ನಲಾದ ಉಮರ್ ಖಾಲಿದ್ ಮತ್ತು ಇತರ ಹಲವರ ವಿರುದ್ಧ ಭಯೋತ್ಪಾದನಾ-ವಿರೋಧಿ ಕಾನೂನು ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ, ಗಲಭೆಯಲ್ಲಿ 53 ಜನರು ಬಲಿಯಾಗಿದ್ದರು ಮತ್ತು 700 ಕ್ಕೂ ಹೆಚ್ಚು ಜನರು ಗಾಯಗೊಂಡರು. ಪೌರತ್ವ ಕಾನೂನು ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿತು.

ಉಮರ್‍ಖಾಲಿದ್ ಅಲ್ಲದೆ, ಖಾಲಿದ್ ಸೈಫಿ, ವಿದ್ಯಾರ್ಥಿಗಳಾದ ನತಾಶಾ ನರ್ವಾಲ್ ಮತ್ತು ದೇವಾಂಗನಾ ಕಲಿತಾ, ಜಾಮಿಯಾ ಸಮನ್ವಯ ಸಮಿತಿ ಸದಸ್ಯರಾದ ಸಫೂರ ಜಗರರ್, ಎಎಪಿ ಮಾಜಿ ಕೌನ್ಸಿಲರ್ ತಾಹಿರ್ ಹುಸೇನ್ ಮತ್ತು ಹಲವರ ವಿರುದ್ಧವೂ ಕಠಿಣ ಕಾನೂನಿನಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

error: Content is protected !!