ದೇಶದ ಎಲ್ಲ ಜನರಿಗೂ ಉಚಿತ ವ್ಯಾಕ್ಸಿನ್ ನೀಡುವಂತೆ ಕಾಂಗ್ರೆಸ್ ಒತ್ತಾಯ


ಬೆಳಗಾವಿ: ದೇಶದ ಎಲ್ಲ ಜನರಿಗೂ ಉಚಿತವಾಗಿ ವ್ಯಾಕ್ಸಿನ್ ಲಸಿಕೆ ನೀಡುವಂತೆ ಆಗ್ರಹಿಸಿ ಶನಿವಾರ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟçಪತಿಗೆ ಮನವಿ ಸಲ್ಲಿಸಿದರು.

ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದರೂ ಇದನ್ನು ನಿಯಂತ್ರಣ ಮಾಡುವಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಸಂಪೂರ್ಣ ವೈಫಲ್ಯವಾಗಿದೆ. ರಾಜ್ಯದಲ್ಲಿ ಕೊರೋನಾ ಸೊಂಕಿನಿAದ ಜನರು ಮೃತಪಡುತ್ತಿದ್ದರೂ ಸರಕಾರ ಮಾತ್ರ ದಿವ್ಯ ನಿರ್ಲಕ್ಷ್ಯ ವಹಿಸಿದೆ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ನಿತ್ಯ 1 ಕೋಟಿ ಜನರಿಗೆ ವ್ಯಾಕ್ಸಿನ್ ಕೊಡುವುದಾಗಿ ಹೇಳಿದ್ದಾರೆ. ಆದರೆ ಕೊರೋನಾ ವಾರಿಯರ್ಸ್ ಗಳಿಗೆ ಇನ್ನೂ ಕೆಲ ಕಡೆಗಳಲ್ಲಿ ವ್ಯಾಕ್ಸಿನ್ ಸಿಕ್ಕಿಲ್ಲ ಕೂಡಲೇ ಸರಕಾರ ದೇಶದ ಪ್ರತಿಯೊಬ್ಬ ಪ್ರಜೆಗೂ ಉಚಿತ ವ್ಯಾಕ್ಸಿನ್ ಕೊಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದರು.
ಕೇಂದ್ರ ಸರಕಾರದ ಅಚ್ಚೆ ದಿನ ನಮಗೆ ಬೇಡ ಮೊದಲಿನ ಬುರೇ ದಿನಗಳನ್ನೇ ಕೊಡಿ. ದೇಶದ ಎಲ್ಲ ಜನರಿಗೆ ಕಡ್ಡಾಯವಾಗಿ ಉಚಿತ ಕೊರೋನಾ ಲಸಿಕೆ ಕೊಡಬೇಕು. ಇದು ನಮ್ಮ ದೇಶದ ಜನರ ಹಕ್ಕಾಗಿದೆ. ಪ್ರತಿ ದಿನ ಒಂದು ಕೋಟಿ ಜನರಿಗೆ ಉಚಿತ ಲಸಿಕೆ ನೀಡುವ ಕೆಲಸವಾಗಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಪೆಟ್ರೋಲ್ ಡಿಸೇಲ್ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೆ ಏರಿಕೆಯಾಗುತ್ತಿದೆ. ಸುಮಾರು 30 ಬಾರಿ ಏರಿಕೆ ಮಾಡಿ ಮೂರು ಬಾರಿ ಇಳಿಕೆ ಮಾಡಿದ್ದಾರೆ. ಇದರಿಂದ ಸಾಮಾನ್ಯ ಜನರು ಯಾವ ರೀತಿ ಜೀವನ ಮಾಡಬೇಕು ಎಂಬುದೇ ತಿಳಿಯುತ್ತಿಲ್ಲ. ಅಲ್ಲದೆ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡಿ ಜನಸಾಮಾನ್ಯರಿಗೆ ಹೊರೆ ಮಾಡಿರುವುದು ಖಂಡಿನೀಯ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಕಿಸಾನ್ ಕಾಂಗ್ರೆಸ್ ರಾಜ್ಯ ಸಂಚಾಲಕ ರಾಜೇಂದ್ರ ಪಾಟೀಲ, ರಾವಸಾಬ್ ಪಾಟೀಲ, ಪರುಶುರಾಮ ಒಗ್ಗನವರ, ಗಜು ಧರನಾಯಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

error: Content is protected !!