ಧರ್ಮಸ್ಥಳ ಧರ್ಮಾಧಿಕಾರಿಗಳನ್ನು ಭೇಟಿ ಮಾಡಿದ ರವಿ ಕುಶಾಲಪ್ಪ

ರಾಜ್ಯ ಪಶ್ಚಿಮ ಘಟ್ಟಗಳ ಕಾರ್ಯಪಡೆ ಅಧ್ಯಕ್ಷ ರವಿಕುಶಾಲಪ್ಪ ರವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಯವರ ಕಚೇರಿಯಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣೆಯ ಕುರಿತು ಕಾರ್ಯಾಗಾರ ಆಯೋಜಿಸುವ ಕುರಿತು ಸಭೆ ನಡೆಸಿದರು ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುವ ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿನ ಚಾರ್ಮಡಿಘಾಟ್, ಶಿರಾಡಿ ಘಾಟ್ ನಲ್ಲಿ ಜಲಮೂಲ ಸಂರಕ್ಷಣೆಗೆ ಸಾರ್ವಜನಿಕ ಅರಿವು ಮೂಡಿಸುವ ಸಂಬಂಧ ಚರ್ಚೆ ನಡೆಸಲಾಯಿತು.ಇದಕ್ಕೆ ಪ್ರತಿಕ್ರಿಯಿಸಿದ ಡಾ. ವೀರೇಂದ್ರ ಹೆಗ್ಗಡೆ ಮೇ ತೆಂಗಳಿನಲ್ಲಿ ಕಾರ್ಯಗಾರ ಆಯೋಜಿಸಲು ಸಲಹೆ ನೀಡಿದ್ದಾರೆ.