ಧವಸ ಭಂಡಾರ ಸಹಕಾರ ಸಂಘಕ್ಕೆ ಅಗತ್ಯ ನೆರವು: ಕೆ.ಜಿ.ಬೋಪಯ್ಯ

ಹೆರವನಾಡು ಧವಸ ಭಂಡಾರ ಸಹಕಾರ ಸಂಘವು ಶತಮಾನೋತ್ಸವ ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಧವಸ ಭಂಡಾರ ಸಹಕಾರ ಭವನ ನಿರ್ಮಾಣಕ್ಕೆ ಅಗತ್ಯ ನೆರವು ನೀಡಲಾಗುವುದು ಎಂದು ರಾಜ್ಯ ಸರ್ಕಾರಿ ಜಮೀನುಗಳ ಸಂರಕ್ಷಣೆ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ ಅವರು ತಿಳಿಸಿದ್ದಾರೆ.

ಮಡಿಕೇರಿ ತಾಲ್ಲೂಕಿನ ಹೆರವನಾಡು ಗ್ರಾಮದಲ್ಲಿನ ಹೆರವನಾಡು ಧವಸ ಭಂಡಾರ ಶತಮಾನೋತ್ಸವ ಕಾರ್ಯಕ್ರಮ, ನ್ಯಾಯಬೆಲೆ ಅಂಗಡಿ ಆರಂಭ ಹಾಗೂ ಜಲಜೀವನ್ ಮಿಷನ್ ಯೋಜನೆ ಅನುಷ್ಠಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಧವಸ ಭಂಡಾರ ಸಹಕಾರ ಭವನ ನಿರ್ಮಾಣ ಸಂಬಂಧ ಜಾಗವನ್ನು ಆರ್‌ಟಿಸಿ ಮಾಡಿಸಿಕೊಳ್ಳುವಂತಾಗಬೇಕು. ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ಶಾಸಕರ ಅನುದಾನದಿಂದ ಅಗತ್ಯ ನೆರವು ನೀಡಲಾಗುವುದು ಎಂದು ಶಾಸಕರು ನುಡಿದರು.

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಇಡೀ ರಾಜ್ಯದಲ್ಲಿಯೇ 3 ನೇ ಸ್ಥಾನ ಪಡೆದು ಸಹಕಾರ ಕ್ಷೇತ್ರದಲ್ಲಿ ಮಹತ್ತರ ಮೈಲುಗಲ್ಲು ಸಾಧಿಸಿದೆ. ಆ ನಿಟ್ಟಿನಲ್ಲಿ ಪ್ರಥಮ ಸ್ಥಾನ ಪಡೆಯಲು ಪ್ರಯತ್ನಿಸಬೇಕು ಎಂದು ಶಾಸಕರು ಹೇಳಿದರು.
ಜಿಲ್ಲೆಯ ಹಿರಿಯರು ಕಟ್ಟಿ ಬೆಳೆಸಿದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕನ್ನು ಸಹಕಾರ ತತ್ವದಡಿ ಮುಂದುವರೆಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಎಂದು ಕೆ.ಜಿ.ಬೋಪಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

error: Content is protected !!