ಧೋನಿ ತಂದೆ ತಾಯಿಗೆ ಕೊರೋನಾ!

ರಾಂಚಿ: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್. ಧೋನಿ ಅವರ ತಂದೆ ತಾಯಿಗೆ ಕೊರೊನಾ ಸೋಂಕು ದೃಢವಾದ ಹಿನ್ನೆಲೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಧೋನಿ ತಂದೆ ಪಾನ್‌ ಸಿಂಗ್‌ ಮತ್ತು ತಾಯಿ ದೇವಕಿ ದೇವಿ ಅವರಿಗೆ ಕೊರೊನಾ ಸೋಂಕು ತಗುಲಿದೆ. ಅವರಿಗೆ ಜಾರ್ಖಂಡ್ ನ ರಾಂಚಿಯಲ್ಲಿರುವ ಪಲ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

error: Content is protected !!