ನಕ್ಷತ್ರ‌ ಆಮೆ ಸಾಗಿಸುತ್ತಿದ್ದ ಇಬ್ಬರ ಬಂಧನ

ಅಪರೂಪದ ನಕ್ಷತ್ರ ಆಮೆಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿಯಲ್ಲಿ ಬಂಧಿಸಲಾಗಿದೆ.

ಮಡಿಕೇರಿಯ ಚೈನ್ ಗೇಟ್ ಬಳಿ ಅರಣ್ಯ ಸಂಚಾರಿ ದಳದ ಸಿಐಡಿ ವಿಭಾಗಕ್ಕೆ ಸಿಕ್ಕ ಖಚಿತ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಲಾಗಿದ್ದು ಮನ್ಸೂರ್ ಮತ್ತು ಅಫ್ರೋಜ್ ಪಾಷಾ ಎಂಬಿಬ್ಬರನ್ನು ಬಂಧಿಸಿದ್ದು ಒಂದು ಜೀವಂತ ಆಮೆಯನ್ನು ರಕ್ಷಿಸಲಾಗಿದ್ದು, ಜಾಲದ ಕುರಿತು ಅಧಿಕಾರಿಗಳಿಂದ ತನಿಖೆ ಮುಂದುವರೆದಿದೆ.

error: Content is protected !!