ನರಿಯಂದಡ ಗ್ರಾಪಂ ವ್ಯಾಪ್ತಿಯ ವರ್ತಕರಿಗೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯ

ವರದಿ: ಸಿ.ಎ.ಅಶ್ರಫ್ ಚೆಯ್ಯಂಡಾಣೆ
ಚೆಯ್ಯಂಡಾಣೆ,ಮೇ 22: ಕೊರೋನ ಮಹಾಮಾರಿ ವ್ಯಾಪಕ ವಾಗಿ ಹರಡುತಿರುದರಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೋನ ವೈರಸ್ ಹರಡದಂತೆ ತಡೆಗಟ್ಟಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಅಗತ್ಯ ವಸ್ತುಗಳ ಪೂರೈಕೆದಾರರು, ಅಂಗಡಿಗಳ ಮಾಲೀಕರು ಮತ್ತು ಕೆಲಸ ನಿರ್ವಹಿಸುವವರು ಕಡ್ಡಾಯವಾಗಿ ಕೊರೋನ ವೈರಸ್ ಪರೀಕ್ಷೆಯನ್ನು ತ್ವರಿತವಾಗಿ ಮಾಡಿಸಿಕೊಳ್ಳಬೇಕು. ಹಾಗೂ ನೆಗೆಟಿವ್ ರಿಪೋರ್ಟ್ ಇದಲ್ಲಿ ಮಾತ್ರ ವ್ಯಾಪಾರ ಮಾಡಲು ಅವಕಾಶ ನೀಡಲಾಗುದೆಂದು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಬಿದ್ದಂಡ ರಾಜೇಶ್ ಅಚ್ಚಯ್ಯ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿರುತ್ತಾರೆ.
ಇನ್ನು ಮುಂದೆ ನೆಗೆಟಿವ್ ರಿಪೋರ್ಟ್ ಇಲ್ಲದ ಅಂಗಡಿ ಮಾಲೀಕರಿಗೆ ಅಂಗಡಿಗಳನ್ನು ತೆರೆಯಲು ವ್ಯಾಪಾರ ವಹಿವಾಟುಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶಗಳಿರುದಿಲ್ಲ. ಕಾನೂನು ಉಲ್ಲಘಿಸಿದರೆ, ಅಂಗಡಿಗಳ ಪರವಾನಗಿಯನ್ನು ರದ್ದು ಪಡಿಸಲಾಗುದೆಂದು ಪತ್ರಿಕಾ ಪ್ರಕಟಣೆಯಲ್ಲಿ ಅವರು ಎಚ್ಚರಿಸಿದ್ದಾರೆ.