ನಾಪಂಡ ರವಿ ಕಾಳಪ್ಪ ಅವರಿಂದ ಸಚಿವ ಆನಂದ್ ಸಿಂಗ್ ಭೇಟಿ

ಬೆಂಗಳೂರು : ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಪ್ರವಾಸೋದ್ಯಮ ಮತ್ತು ಜೀವ ವೈವಿಧ್ಯ ಸಚಿವರಾದ ಆನಂದ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಸಚಿವರ ಕಚೇರಿಯಲ್ಲಿ ಭೇಟಿಯಾದ ರವಿ ಕಾಳಪ್ಪ ಜೀವ ವೈವಿಧ್ಯಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ಚರ್ಚೆ ನಡೆಸಿದರು. ರಾಜ್ಯಾದ್ಯಂತ ವಿವಿಧ ರೀತಿಯ ಜೀವ ಸಂಕುಲಗಳಿದ್ದು, ಅವುಗಳ ಸಂರಕ್ಷಣೆ ಮತ್ತು ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ಸಚಿವರ ಗಮನಸೆಳೆದರು. ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಹಮ್ಮಿಕೊಳ್ಳಬಹುದಾದ ಕಾರ್ಯಕ್ರಮಗಳ ಬಗ್ಗೆ ಈ ಸಂಬಂಧ ಪ್ರತಿಕ್ರಿಯಿಸಿದ ಸಚಿವ ಆನಂದ್ ಸಿಂಗ್, ಕಾರ್ಯಕ್ರಮ ಆಯೋಜನೆ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವುದು ಎಂದರು.