fbpx

ನಾಳೆಯಿಂದ ಒಂಬತ್ತು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ

ರಾಜ್ಯದ ದಕ್ಷಿಣ ಒಳನಾಡು ಹಾಗು ಕರಾವಳೀ ಜಿಲ್ಲೆಗಳಲ್ಲಿ ನಾಳೆಯಿಂದ ಜುಲೈ 1ರ ತನಕ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಂಗಳೂರು, ಹಾಸನ, ಶಿವಮೊಗ್ಗ, ಉಡುಪಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆಯಾಗುವ ನಿರೀಕ್ಷೆ ಇದ್ದು ಜುಲೈ 1ರ ತನಕ ಆರೆಂಜ್ ಅಲಟ್೯ ಘೋಷಿಸಲಾಗಿದೆ. ಮುಂಗಾರು ಚುರುಕಾಗಿರುವುದರಿಂದ ಇನ್ನೂ ಒಂದು ವಾರ ರಾಜ್ಯದಲ್ಲಿ ಮಳೆ ನಿರಂತರವಾಗಿರುವ ಸಧ್ಯತೆ ಹೆಚ್ಚಿದೆ.

error: Content is protected !!