ನಾಳೆ ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಉದ್ಘಾಟನೆ

ಮಡಿಕೇರಿ: ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಉದ್ಘಾಟನಾ ಸಮಾರಂಭವು 14 ಅಂದರೆ ನಾಳೆ ಅಪರಾಹ್ನ 2 ಗಂಟೆಗೆ ನಗರದ ಕೊಡಗು ಪತ್ರಿಕಾ ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಹಾಗು ಸಂಶೋಧನೆ ವಿಭಾಗದ ಶ್ರೀಮತಿ ಡಾ ಕವಿತಾ ರೈ ಅವರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಅಧ್ಯಕ್ಷರಾದ ಶ್ರೀಮತಿ ಶೋಭಾ ಸುಬ್ಬಯ್ಯ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಕ.ಸಾ.ಪ ಅಧ್ಯಕ್ಷರಾದ
ಶ್ರೀ ಕೇಶವ ಕಾಮತ್, ಮಾಜಿ ಅಧ್ಯಕ್ಷರಾದ ಶ್ರೀ ಟಿ ಪಿ ರಮೇಶ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಅಂಬೆಕಲ್ ನವೀನ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಶ್ರೀಮತಿ ಉಳ್ಳಿಯಡ ಡಾಟಿ ಪೂವಯ್ಯ, ಮಡಿಕೇರಿ ನಗರಸಭೆಯ ಮಾಜಿ ಅಧ್ಯಕ್ಷೆಯಾದ ಶ್ರೀಮತಿ ಮೂಟೇರ ಪುಷ್ಪಾವತಿ
ಅಧ್ಯಕ್ಷರು ಕಾರ್ಯದರ್ಶಿಗಳು ಪದಾಧಿಕಾರಿಗಳು ನಿರ್ದೇಶಕರು ಎಲ್ಲರೂ ಅಪರಾಹ್ನ 1 ಗಂಟೆಗೆ ಬಂದು ಸಹಕರಿಸಬೇಕಾಗಿ ಪ್ರಧಾನ ಕಾರ್ಯದರ್ಶಿಗಳಾದ ರೇವತಿ ರಮೇಶ್ ಅವರು ತಿಳಿಸಿದ್ದಾರೆ.