fbpx

ಇಂದು ರಾಜ್ಯಾದ್ಯಂತ ‘ಕೋವಿಡ್-19 ಲಸಿಕಾ ಮೇಳ’ : ಇವರಿಗೆಲ್ಲಾ ಸಿಗಲಿದೆ ‘ಕೊರೋನಾ ಲಸಿಕೆ’

ಇಂದು ರಾಜ್ಯದ್ಯಂತ ಕೋವಿಡ್-19 ವಿಶೇಷ ಲಸಿಕಾ ಮೇಳವನ್ನು ನಡೆಸಲಾಗುತ್ತಿದೆ. ಈ ಮೇಳದಲ್ಲಿ ಆದ್ಯತೆಯ ಮೇರೆಗೆ ರಾಜ್ಯದಲ್ಲಿ ಕೊರೋನಾ ಲಸಿಕೆ ನೀಡಲಾಗುತ್ತಿದೆ.

ಈ ಕುರಿತಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕಿ ಅರುಂದತಿಯವರು ಬಿಬಿಎಂಪಿ ಮುಖ್ಯ ಆಯುಕ್ತರಿಗೆ, ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆಯಲ್ಲಿ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ಧಿಯ ಉಪಕ್ರಮವಾಗಿ ದಿನಾಂಕ 27-08-2021ರಂದು ರಾಜ್ಯಾದ್ಯಂತ ಕೋವಿಡ್-19 ಲಸಿಕಾ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಈ ಮೇಳದಲ್ಲಿ ಈ ಕೆಳಕಂಡ ಗುಂಪಿನವರಿಗೆ ಆದ್ಯತೆ ನೀಡುವ ಮುಖಾಂತರ ಈ ಕೋವಿಡ್ ಲಸಿಕಾ ಮೇಳವನ್ನು ಯಶಸ್ವಿಗೊಳಿಸುವಂತೆ ಕೋರಿದ್ದಾರೆ.

ಇಂದು ಯಾರಿಗೆಲ್ಲಾ ಲಸಿಕೆ ಸಿಗಲಿದೆ.?
ಇದುವರೆಗೆ ಒಂದು ಡೋಸ್ ಲಸಿಕೆ ಪಡೆಯದ ಆರೋಗ್ಯ ಕಾರ್ಯಕರ್ತರ ಮತ್ತು ಮುಂಚೂಣಿ ಕಾರ್ಯಕರ್ತರ ಶೇ.100ರಷ್ಟು ಕೋವಿಡ್-19 ಲಸಿಕಾಕರಣ 2ನೇ ಡೋಸ್ ಗೆ ಬಾಕಿ ಇರುವ ಆರೋಗ್ಯ ಕಾರ್ಯಕರ್ತರ ಮತ್ತು ಮುಂಚೂಣಿ ಕಾರ್ಯಕರ್ತರ ಶೇ.100ರಷ್ಟು ಕೋವಿಡ್-19 ಲಸಿಕಾಕರಣ 60 ವರ್ಷ ಮೇಲ್ಪಟ್ಟವರ 1ನೇ ಡೋಸ್ ಹಾಗೂ 2ನೇ ಡೋಸ್ ಕೋವಿಡ್ ಲಸಿಕಾಕರಣ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 1 ರಿಂದ 10ನೇ ತರಗತಿ, ಪದವಿ ಪೂರ್ವ ಕಾಲೇಜಿನ ( 11ನೇ ಹಾಗೂ 12ನೇ ತರಗತಿ ಅನ್ವಯಿಸುವಲ್ಲಿ ) ಬೋಧಕ, ಬೋಧಕೇತರ ಸಿಬ್ಬಂದಿಗಳು ಇನ್ನೂ ಕೋವಿಡ್-19 ಲಸಿಕೆ ಪಡೆಯದಿದ್ದಲ್ಲಿ ಅವರಿಗೆ ಲಸಿಕಾಕರಣ ಇತರೆ 18 ವರ್ಷ ಮೇಲ್ಪಟ್ಟ ಅರ್ಹ ಫಲಾನುಭವಿಗಳ ಕೋವಿಡ್-19 ಲಸಿಕಾಕರಣ ಆಗಲಿದೆ.

error: Content is protected !!