ನಾಳೆ ಶ್ರೀ ಶಂಕರಾಚಾರ್ಯರ ಜಯಂತಿ

ಮಡಿಕೇರಿ ಮೇ.05: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮೈಸೂರು ವಿಭಾಗ, ಕೊಡಗು ಜಿಲ್ಲೆ ಮಡಿಕೇರಿ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಶಂಕರಾಚಾರ್ಯರ ರಾಜ್ಯ ಮಟ್ಟದ ಜಯಂತಿಯು ಮೇ, 6 ರಂದು ಬೆಳಗ್ಗೆ 11 ಗಂಟೆಗೆ ನಗರದ ಶ್ರೀ ಲಕ್ಷ್ಮಿನರಸಿಂಹ ಕಲ್ಯಾಣ ಮಂಟಪದ ಶತಮಾನ ಭವನದಲ್ಲಿ ನಡೆಯಲಿದೆ.
ಮೆರವಣಿಗೆಯು ನಗರದ ಗಾಂಧಿ ಮೈದಾನದಿಂದ ಬೆಳಗ್ಗೆ 9 ಗಂಟೆಗೆ ಶ್ರೀ ಶಂಕರಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಗಾಂಧಿ ಮೈದಾನದಿಂದ ಪ್ರಾರಂಭವಾಗಿ ಜನರಲ್ ತಿಮ್ಮಯ್ಯ ವೃತ್ತ, ಮಂಗೇರಿರ ಮುತ್ತಣ್ಣ ವೃತ್ತ, ಸ್ಕ್ವಾಡ್ರನ್ ಲೀಡರ್ ದೇವಯ್ಯ ವೃತ್ತ, ಗುಡ್ಡೆಮನೆ ಅಪ್ಪಯ್ಯಗೌಡ ರಸ್ತೆ, ಓಂಕಾರೇಶ್ವರ ದೇವಾಲಯದ ಮಾರ್ಗವಾಗಿ ಶ್ರೀ ಲಕ್ಷ್ಮಿನರಸಿಂಹ ಕಲ್ಯಾಣ ಮಂಟಪ ತಲುಪಲಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷರಾದ ರವಿಕುಶಾಲಪ್ಪ, ಸಂಸದರಾದ ಪ್ರತಾಪ್‍ಸಿಂಹ, ಶಾಸಕರಾದ ವೀಣಾ ಅಚ್ಚಯ್ಯ, ಎಸ್.ಲ್.ಬೋಜೇಗೌಡ, ಸುಜಾ ಕುಶಾಲಪ್ಪ, ಆಯನೂರು ಮಂಜುನಾಥ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಮೇಶ್ ಹೊಳ್ಳ,
ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಅಧ್ಯಕ್ಷರಾದ ಗೋಪಾಲಕೃಷ್ಣ, ಪುತ್ತೂರು ಅಂಬಿಕಾ ಪದವಿ ವಿದ್ಯಾಲಯದ ಪ್ರಾಚಾರ್ಯರಾದ ಡಾ.ವಿನಾಯಕ ಭಟ್ ಗಾಳಿಮನೆ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಜಂಟಿ ನಿರ್ದೇಶಕರಾದ ಮಲ್ಲಿಕಾರ್ಜುನ ಸ್ವಾಮಿ ಇತರರು ಪಾಲ್ಗೊಳ್ಳಲಿದ್ದಾರೆ.