fbpx

ನಾಳೆ ಸಚಿವ ಅಂಗಾರ ಅವರ ಕೊಡಗು ಜಿಲ್ಲಾ ಪ್ರವಾಸ

ಮಡಿಕೇರಿ: ಮೀನುಗಾರಿಕೆ, ಬಂದರು ಹಾಗು ಒಳನಾಡು ಜಲಸಾರಿಗೆ ಸಚಿವರಾದ ಎಸ್ ಅಂಗಾರ ಅವರು ತಾ. 27ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಬೆಳಿಗ್ಗೆ 10:30 ಗಂಟೆಗೆ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿಯ ದಶ ವರ್ಷ ಸಂಭ್ರಮವನ್ನು ಉದ್ಘಾಟಿಸಲಿದ್ದಾರೆ. ನಂತರ ಮಧ್ಯಾಹ್ನ 12 ಗಂಟೆಗೆ ಕಗ್ಗೋಡುವಿನ ಪ್ರಗತಿ ಪರ ರೈತ ಮಂದ್ರೀರ ತೇಜಸ್ ನಾಣಯ್ಯ ಅವರ ಕಚೇರಿಗೆ ಭೇಟಿ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 1:45 ಗಂಟೆಗೆ ಗುಡ್ಡೆಹೊಸೂರಿನ ಖಾಸಗಿ ರೆಸಾಟ್೯ನಲ್ಲಿ ಇಲಾಖಾಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

ನಂತರ ಮಧ್ಯಾಹ್ನ ಹಾರಂಗಿ ಮೀನು ಮರಿ ಪಾಲನಾ ಕೇಂದ್ರಕ್ಕೆ ಭೇಟಿ ಮಾಡಿ, ಮಹಶೀರ್ ಮೀನುಮರಿ ಉತ್ಪಾದನಾ ಪ್ರಕ್ರಿಯೆ ವೀಕ್ಷಣೆ ಮಾಡಲಿದ್ದಾರೆ. ಸಂಜೆ 4:15ಕ್ಕೆ ಗರಂದೂರು ಎಂ.ಟಿ ವಿಜಯೇಂದ್ರ ಅವರ ಮೀನು ಕೃಷಿ ಕೊಳಗಳಿಗೆ ಭೇಟಿ ಹಾಗು ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!